ಕೂನೂರಿನಲ್ಲಿ ಸೇನಾ ಹೆಲಿಕಾಪ್ಟರ್ ಪತನ; ಭದ್ರತೆ ಕುರಿತು ಸಂಪುಟ ಸಚಿವರ ಜೊತೆ ಪ್ರಧಾನಿ ಮೋದಿ ಸಭೆ | Chopper Crash PM Narendra Modi Meets Senior Ministers as CDS 13 Officials including Bipin Rawat Dead in Coonoor


ಕೂನೂರಿನಲ್ಲಿ ಸೇನಾ ಹೆಲಿಕಾಪ್ಟರ್ ಪತನ; ಭದ್ರತೆ ಕುರಿತು ಸಂಪುಟ ಸಚಿವರ ಜೊತೆ ಪ್ರಧಾನಿ ಮೋದಿ ಸಭೆ

ಭದ್ರತೆ ಕುರಿತು ಸಂಪುಟ ಸಮಿತಿ ಜೊತೆ ಪ್ರಧಾನಿ ನರೇಂದ್ರ ಮೋದಿ ಸಭೆ

ನವದೆಹಲಿ: ತಮಿಳುನಾಡಿನ ಕೂನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಭಾರತೀಯ ಸೇನಾ ಮುಖ್ಯಸ್ಥ ಸಿಡಿಎಸ್​ ಬಿಪಿನ್​ ರಾವತ್ ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ತುರ್ತು ಸಭೆ ಶುರುವಾಗಿದೆ. ಭದ್ರತೆ ಕುರಿತು ಕೇಂದ್ರ ಸಂಪುಟ ಸಚಿವರ ಜತೆ ಪ್ರಧಾನಿ ಮೋದಿ ಸಭೆ ನಡೆಸುತ್ತಿದ್ದಾರೆ. ದೆಹಲಿಯ ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಪ್ರಧಾನಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಇಂದು ನಡೆದ ದುರಂತದ ಬಗ್ಗೆ ಮಾಹಿತಿ ನೀಡಲಿದ್ದಾರೆ.

ಭಾರತದ ಮೊದಲ ಸಿಡಿಎಸ್ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಸೇರಿದಂತೆ 13 ಜನರು ಹೆಲಿಕಾಪ್ಟರ್ ಪತನದಲ್ಲಿ ಸಾವನ್ನಪ್ಪಿದ್ದಾರೆ. ಈ ಘಟನೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಟ್ವೀಟ್ ಮಾಡಿದ್ದು, ಬಿಪಿನ್ ರಾವತ್ ಅತ್ಯುತ್ತಮ ಯೋಧ, ಅಪ್ರತಿಮೆ ದೇಶಭಕ್ತರಾಗಿದ್ದರು. ನಮ್ಮ ಸೇನಾ ಪಡೆಯನ್ನು ಆಧುನೀಕರಣಗೊಳಿಸಲು ಬಿಪಿನ್ ರಾವತ್ ಬಹಳ ದೊಡ್ಡ ಕೊಡುಗೆ ನೀಡಿದ್ದಾರೆ. ಅವರ ನಿಧನದಿಂದ ಬಹಳ ಆಘಾತವಾಗಿದೆ. ತಮಿಳುನಾಡಿನ ಹೆಲಿಕಾಪ್ಟರ್ ಪತನದಲ್ಲಿ ಬಿಪಿನ್ ರಾವತ್ ಸಾವನ್ನಪ್ಪಿದ್ದು, ನಾನು ಆಘಾತಕ್ಕೊಳಗಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಇಂದಿನ ಸಭೆಯಲ್ಲಿ ಸೇನಾ ಹೆಲಿಕಾಪ್ಟರ್ ಅಪಘಾತದಿಂದ ಉಂಟಾಗಿರುವ ಪರಿಸ್ಥಿತಿಯನ್ನು ಚರ್ಚಿಸಲಾಗುವುದು. ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ. ಈಗಾಗಲೇ ಹೆಲಿಕಾಪ್ಟರ್ ಪತನದ ಬಗ್ಗೆ ರಾಜನಾಥ್ ಸಿಂಗ್ ಈಗಾಗಲೇ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಸೇನಾ ಹೆಲಿಕಾಪ್ಟರ್ ಅಪಘಾತದ ನಂತರ ಮಿಲಿಟರಿಯ ಉನ್ನತ ಅಧಿಕಾರಿಗಳು ಬಿಪಿನ್ ರಾವತ್ ಅವರ ಕುಟುಂಬಸ್ಥರನ್ನು ಭೇಟಿಯಾಗಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬಿಪಿನ್ ರಾವತ್ ನಿವಾಸಕ್ಕೆ ಭೇಟಿ ನೀಡಿ ಅವರ ಪುತ್ರಿಯೊಂದಿಗೆ ಮಾತನಾಡಿದರು.

ಭಾರತೀಯ ಸೇನೆಗೆ ಸೇರಿದ ಎಂಐ-17ವಿ5 ಹೆಲಿಕಾಪ್ಟರ್ ಸೂಲೂರಿನಿಂದ ವೆಲ್ಲಿಂಗ್ಟನ್‌ಗೆ ಹಾರಿದ್ದು, ಹೆಲಿಕಾಪ್ಟರ್‌ನಲ್ಲಿ ಒಟ್ಟು 14 ಮಂದಿ ಇದ್ದರು ಎಂದು ಅಧಿಕೃತ ಮೂಲಗಳು ತಿಳಿಸಿವೆ. ತಮಿಳುನಾಡಿನಲ್ಲಿ ಸೇನಾ ಹೆಲಿಕಾಪ್ಟರ್ ಪತನದ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಾಳೆ ಸಂಸತ್ತಿಗೆ ವಿವರಣೆ ನೀಡುವ ಸಾಧ್ಯತೆಯಿದೆ.

ಪತನವಾದ ಸೇನಾ ಹೆಲಿಕಾಪ್ಟರ್ ನಲ್ಲಿ ಜನರಲ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್ಎಸ್ ಲಿಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ನಾಯಕ್ ಗುರ್ಸೇವಕ್ ಸಿಂಗ್, ನಾಯಕ್ ಜಿತೇಂದ್ರ ಕುಮಾರ್, ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್, ಲ್ಯಾನ್ಸ್ ನಾಯಕ್ ಬಿ ಸಾಯಿ ತೇಜಾ ಮತ್ತು ಹವಾಲ್ದಾರ್ ಸತ್ಪಾಲ್ ಸೇರಿದಂತೆ 14 ಮಂದಿ ಪ್ರಯಾಣಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

TV9 Kannada


Leave a Reply

Your email address will not be published. Required fields are marked *