ಬೆಂಗಳೂರು: ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಇಂದು ಚಾಮರಾಜನಗರ ಜಿಲ್ಲಾಡಳಿತ ಭವನದಲ್ಲಿ ಮುಂಗಾರು ಹಂಗಾಮಿನ ಪೂರ್ವಸಿದ್ಧತೆ ಸಭೆ ನಡೆಸಿದರು. ಜಿಲ್ಲೆಯ ಜನಪ್ರತಿನಿಧಿಗಳು, ಕೃಷಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆ ಇದೇವೇಳೆ ಸಚಿವ ಬಿ ಸಿ ಪಾಟೀಲ್ ಸಮಾಲೋಚನೆ ನಡೆಸಿದರು.

ಆನಂತರ ರೈತರಿಗೆ ಕೃಷಿ ಚಟುವಟಿಕೆಗಳ ಬಗ್ಗೆ ಮಾಹಿತಿ ಹಾಗೂ ಇಲಾಖೆಯ ಇತರೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪ್ರಚಾರ ನೀಡಲು “ಇಲಾಖೆಯ ನಡಿಗೆ ರೈತರ ಕಡೆಗೆ” ಎಂಬ ಕಾರ್ಯಕ್ರಮದಡಿ ವಾಹನಗಳಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲೆಯ ಜನಪ್ರತಿನಿಧಿಗಳು, ಕೃಷಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

The post ‘ಕೃಷಿ ಇಲಾಖೆ ನಡಿಗೆ – ರೈತರ ಕಡೆಗೆ’ ಕಾರ್ಯಕ್ರಮಕ್ಕೆ ಬಿ.ಸಿ ಪಾಟೀಲ್ ಚಾಲನೆ appeared first on Public TV.

Source: publictv.in

Source link