ಕೃಷಿ ಕಾನೂನು ಹಿಂಪಡೆತ ಕೇವಲ ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ-HDK ಲೇವಡಿ


ರೈತರ ಭಾರೀ ವಿರೋಧಕ್ಕೆ ಕಾರಣವಾಗಿದ್ದ ಮೂರು ಕೃಷಿ ಕಾಯ್ದೆಗಳನ್ನ ಕೇಂದ್ರ ಸರ್ಕಾರ ವಾಪಸ್ ಪಡೆದುಕೊಳ್ಳುವುದಾಗಿ ಘೋಷಿಸಿದೆ. ಈ ಕುರಿತು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಮೋದಿ ಅವರ ಈ ನಿರ್ಧಾರ ಸ್ವಾಗತಾರ್ಹ ಎಂದಿದ್ದಾರೆ.

ಸರಣಿ ಟ್ವೀಟ್​ ಮಾಡಿದ ಅವರು ‘ರೈತರ ಆಕ್ರೋಶಕ್ಕೆ ಗುರಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಸ್ವಾಗತಾರ್ಹ. ಕೊನೆಗೂ ಕೇಂದ್ರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ. ರೈತರ ಜತೆ ಚರ್ಚೆ ನಡೆಸದೇ ಈ ಕಾಯ್ದೆಗಳ ಏಕಪಕ್ಷೀಯ ಜಾರಿ‘ ಮತ್ತು ರದ್ದತಿ ಅನೇಕ ಪ್ರಶ್ನೆ ಹುಟ್ಟುಹಾಕಿದೆ.

ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಇದೆ. ಕೇಂದ್ರದ ನಿರ್ಧಾರ ಪ್ರಾಮಾಣಿಕವಾಗಿರಲಿ. ಕೇವಲ ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ. ಚುನಾವಣೆ ಮುಗಿದ ಮೇಲೆ ಆ ಕರಾಳ ಕಾಯ್ದೆಗಳನ್ನು ಬೇರೆ ರೂಪದಲ್ಲಿ ಪುನಃ ಜಾರಿ ಮಾಡುವುದಿಲ್ಲ ಎಂದು ಪ್ರಧಾನಿಗಳು ತಮ್ಮ ಭಾಷಣದಲ್ಲಿ ರೈತರಿಗೆ ಮಾತು ಕೊಡಬೇಕಿತ್ತು.

ಇದನ್ನೂ ಓದಿ:BIG BREAKING ನೂತನ 3 ಕೃಷಿ ಕಾನೂನು ವಾಪಸ್​ ಪಡೆಯುತ್ತೇವೆ -ಪ್ರಧಾನಿ ಮೋದಿ ಘೋಷಣೆ

ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಸೇರಿದಂತೆ ದೇಶದ ನಾನಾ ಕಡೆ ರೈತರ ವಿರುದ್ಧ ನಡೆದಿರುವ ದೌರ್ಜನ್ಯಕ್ಕೆ ಪ್ರಧಾನಿಗಳು ತಮ್ಮ ಭಾಷಣದಲ್ಲಿ ಕ್ಷಮೆ ಯಾಚನೆ ಮಾಡಬೇಕಿತ್ತು. ಈಗಲಾದರೂ ರೈತರ ಮೇಲೆ ಹಿಂಸಾಚಾರ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲೇಬೇಕು ಎಂದು ಟ್ವೀಟ್​ ಮಾಡುವ ಮೂಲಕ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಅನ್ನದಾತರ ಹೋರಾಟಕ್ಕೆ ಮಣಿದ ಮೋದಿ ಸರ್ಕಾರ; ವಾಪಸ್ ಪಡೆದ 3 ಕೃಷಿ ಕಾಯ್ದೆಗಳು ಯಾವುದು..?

News First Live Kannada


Leave a Reply

Your email address will not be published. Required fields are marked *