ಯಾದಗಿರಿ/ರಾಯಚೂರು: ರಾಜ್ಯ ಹಾಗೂ ಮಹಾರಾಷ್ಟ್ರದಲ್ಲಿ ಮತ್ತೆ ಮಳೆರಾಯನ ಆರ್ಭಟ ಜೋರಾಗಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿ ತೀರದ ಜನರಿಗೆ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ನಾರಾಯಾಣಪುರ ಬಸವಸಾಗರ ಜಲಾಶಯದಿಂದ 1 ಲಕ್ಷ 20 ಸಾವಿರ ಕ್ಯೂಸೆಕ್ ನೀರನ್ನ ನದಿಗೆ ಬಿಡಲಾಗಿದೆ.

ಹೀಗಾಗಿ ಕೃಷ್ಣಾನದಿ ಪಾತ್ರದ ಜನರಿಗೆ ಹೈ-ಅಲರ್ಟ್​ ಘೋಷಣೆ ಮಾಡಲಾಗಿದೆ. ಮಹಾರಾಷ್ಟ್ರದಿಂದ ಹೆಚ್ಚಿನ ನೀರು ಹರಿದು ಬಂದ ಹಿನ್ನೆಲೆ ಇಲ್ಲಿನ ನದಿಗಳೆಲ್ಲ ತುಂಬಿ ಹರಿಯುತ್ತಿವೆ. ಬಸವಸಾಗರ ಜಲಾಶಯಕ್ಕೆ ಒಳ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ನದಿಗೆ 1ಲಕ್ಷ 20 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ.

ಇನ್ನು ರಾಯಚೂರಿನ ನಾರಾಯಣಪುರ ಜಲಾಶಯದಿಂದ 1,18,400 ಕ್ಯೂಸೆಕ್ ನೀರನ್ನ ಹೊರಕ್ಕೆ ಬಿಡಲಾಗಿದೆ. ಆಲಮಟ್ಟಿ ಜಲಾಶಯದಲ್ಲಿ ಸದ್ಯ 95,000 ಒಳಹರಿವು ಇದೆ. ಸಂಜೆಯೊಳಗೆ 1,50 ಸಾವಿರ ಕ್ಯೂಸೆಕ್ ನೀರು ಹೊರಬಿಡುವ ಸಾಧ್ಯತೆ ಇದೆ.

ಹೀಗಾಗಿ ಕೃಷ್ಣಾ ನದಿ ಪಾತ್ರದ ಜನರಲ್ಲಿ ಪ್ರವಾಹದ ಭೀತಿ ಎದುರಾಗಿದ್ದು, ಹೈ-ಅಲರ್ಟ್​ ಘೋಷಣೆ ಮಾಡಲಾಗಿದೆ. ಅದರಂತೆ ರಾಯಚೂರು ತಾಲೂಕಿನ ಆತ್ಕೂರು ಗ್ರಾಮದಲ್ಲಿ ಮೈಕ್​ ಮೂಲಕ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಎಚ್ಚರಿಕೆಯನ್ನ ನೀಡಲಾಗುತ್ತಿದೆ.

The post ಕೃಷ್ಣಾನದಿಯಲ್ಲಿ ಹೆಚ್ಚಿದ ನೀರಿನ ಪ್ರಮಾಣ; ಬಸವಸಾಗರ ಜಲಾಶಯದಿಂದ 1.20 ಸಾವಿರ ಕ್ಯೂಸೆಕ್​ ನೀರು ಹೊರಕ್ಕೆ appeared first on News First Kannada.

Source: newsfirstlive.com

Source link