ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್​ ನಳಿ ಸಿಲಿಂಡರ್​ ಸ್ಫೋಟಗೊಂಡು ಕ್ಯಾಂಟರ್​ ಒಂದು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

ಕೆಂಪೇಗೌಡ ಏರ್​ಪೋರ್ಟ್​ನ ಎರಡನೇ ಟರ್ಮಿನಲ್​ ಬಳಿ ಅಂಡರ್​​ಪಾಸ್​​ನಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ವೈಟ್ ಟಾಪಿಂಗ್ ಮಾಡುವ ಮಷಿನ್​ಗೆ ಅಳವಡಿಸಲಾಗಿದ್ದ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಸ್ಥಳದಲ್ಲಿ ಕೆಲಸ ಮಾಡ್ತಿದ್ದ ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರವಾಗಿದ್ದು ನಾಲ್ವರು ಗಾಯಗೊಂಡಿದ್ದಾರೆ.

ಎಲ್ಲಾ ಗಾಯಾಳುಗಳನ್ನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಏರ್​ಪೋರ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಂಣ ದಾಖಲಾಗಿದೆ.

The post ಕೆಂಪೇಗೌಡ ಏರ್​ಪೋರ್ಟ್​ ಬಳಿ ಸಿಲಿಂಡರ್ ಸ್ಫೋಟ: ಇಬ್ಬರ ಸ್ಥಿತಿ ಗಂಭೀರ appeared first on News First Kannada.

Source: newsfirstlive.com

Source link