ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್​ ಕರೆ: ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯ ಬಂಧನ | A Fake Bomb call in Kempegowda Airport: Police arrested of a person from West Bengal


ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್​ ಕರೆ: ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯ ಬಂಧನ

ಆರೋಪಿ ಸುಭಾಷ್ ಗುಪ್ತ

ಈ ಸಂಬಂಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದು, ಸದ್ಯ ಈಶಾನ್ಯ ವಿಭಾಗ ಪೊಲೀಸರಿಂದ ಆರೋಪಿಯ ವಿಚಾರಣೆ ಮಾಡಲಾಗುತ್ತಿದೆ. ಬಳಿಕ ಆರೋಪಿಯನ್ನು ವಿಧಾನಸೌಧ ಪೊಲೀಸರ ವಶಕ್ಕೆ ಹಸ್ತಾಂತರಿಸಲಿದ್ದಾರೆ.

ಬೆಂಗಳೂರು: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ​ಗೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತನನ್ನು ನಗರ ಈಶಾನ್ಯ ವಿಭಾಗದ ಪೊಲೀಸರಿಂದ ಬಂಧನ ಮಾಡಲಾಗಿದೆ. ಭಾವನ ಮೇಲೆ ಸೇಡು ತೀರಿಸಿಕೊಳ್ಳಲು ಕರೆ ಮಾಡಿದ್ದ ಸುಭಾಷ್, ವಿಚ್ಛೇದಿತ ಅಕ್ಕನ ಗಂಡನ ವಿರುದ್ಧ ಸೇಡು ತೀರಿಸಿಕೊಳ್ಳಲು ಸಂಚು ಮಾಡಿದ್ದ. ಬೆಳಗಿನ ಜಾವ 3.30ಕ್ಕೆ ಭಾವನ ಹೆಸರು ಹೇಳಿ ಕಂಟ್ರೋಲ್​ ರೂಮ್​ಗೆ ಕರೆ ಮಾಡಿ ಬೆದರಿಕೆ ಹಾಕಿದ್ದ. ಅಕ್ಕನ ಗಂಡನ ಹೆಸರು ಹೇಳಿದರೆ ಅವನನ್ನು ಬಂಧಿಸುತ್ತಾರೆ ಅಂದ್ಕೊಂಡಿದ್ದ. ಸುಭಾಷ್ ಗುಪ್ತ ಈ ಹಿಂದೆ ಏರ್​ಪೋರ್ಟ್​ನಲ್ಲಿ ಕೆಲಸ ಮಾಡುತ್ತಿದ್ದ. ಈ ಸಂಬಂಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದು, ಸದ್ಯ ಈಶಾನ್ಯ ವಿಭಾಗ ಪೊಲೀಸರಿಂದ ಆರೋಪಿಯ ವಿಚಾರಣೆ ಮಾಡಲಾಗುತ್ತಿದೆ. ಬಳಿಕ ಆರೋಪಿಯನ್ನು ವಿಧಾನಸೌಧ ಪೊಲೀಸರ ವಶಕ್ಕೆ ಹಸ್ತಾಂತರಿಸಲಿದ್ದಾರೆ.

TV9 Kannada


Leave a Reply

Your email address will not be published. Required fields are marked *