ಬೆಂಗಳೂರು: ಸ್ಯಾಂಡಲ್‍ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅಭಿನಯದ ದಿ ಮೋಸ್ಟ್ ಎಕ್ಸ್‍ಪೆಕ್ಟೆಡ್ ಸಿನಿಮಾ ಕೆಜಿಎಫ್-2 ಬಿಡುಗಡೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಮಧ್ಯೆ ಯಶ್ ಮುಂದಿನ ಸಿನಿಮಾದಲ್ಲಿ ವಿಭಿನ್ನ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ ಎಂಬ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ನಟ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್-2 ಸಿನಿಮಾದ ನಂತರ ನೌಕಾ ನೆಲೆಯ ಅಧಿಕಾರಿಯಾಗಿ ಮುಂದಿನ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಇದೀಗ ಗಾಂಧಿನಗರದಲ್ಲಿ ಹರಿದಾಡುತ್ತಿದೆ.

ಪ್ರತಿ ಸಿನಿಮಾದಲ್ಲಿ ಭಿನ್ನ ಪಾತ್ರಗಳಲ್ಲಿ ಹಾಗೂ ಮಾಸ್ ಲುಕ್‍ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳ ಮನಗೆದ್ದ ರಾಕಿ ಬಾಯ್ ಯಶ್, ಇದೀಗ ನಿರ್ದೇಶಕ ನರ್ತನ್ ಆ್ಯಕ್ಷನ್ ಕಟ್ ಹೇಳುತ್ತಿರುವ ಸಿನಿಮಾಕ್ಕೆ ಬಣ್ಣ ಹಚ್ಚಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಿನಿಮಾ ಕೂಡ ದೊಡ್ಡ ಬಜೆಟ್‍ನಲ್ಲಿ ನಿರ್ಮಾಣವಾಗುತ್ತಿದ್ದು, ಈ ಸಿನಿಮಾದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟಿಗೆ ಚರ್ಚೆ ನಡೆಯುತ್ತಿದೆ.

ಈ ಮುನ್ನ ನಟ ಡಾ.ಶಿವರಾಜ್‍ಕುಮಾರ್ ಹಾಗೂ ಶ್ರೀಮುರುಳಿ ಕಾಂಬಿನೇಷನ್‍ನಲ್ಲಿ ಮೂಡಿಬಂದಿದ್ದ ಮಫ್ತಿ ಸಿನಿಮಾಕ್ಕೆ ನರ್ತನ್ ನಿರ್ದೇಶನ ಮಾಡಿದ್ದರು. ಇದೀಗ್ ರಾಕಿ ಬಾಯ್ ಯಶ್ ಮುಂದಿನ ಸಿನಿಮಾಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಈ ಸಿನಿಮಾದಲ್ಲಿ ಖಡಕ್ ನೌಕಾ ನೆಲೆಯ ಅಧಿಕಾರಿ ಲುಕ್‍ನಲ್ಲಿ ಕಾಣಿಸಿಕೊಳ್ಳಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಅಭಿಮಾನಿಗಳು ಎಡಿಟ್ ಮಾಡಿರುವ ಯಶ್ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಈಗಾಗಲೇ ಬೆಳ್ಳಿ ಪರದೆ ಮೇಲೆ ಬರಬೇಕಿದ್ದ ಕೆಜಿಎಫ್-2 ಸಿನಿಮಾ ಕೊರೊನಾದಿಂದ ಕೊಂಚ ತಡವಾಗಿ ಬಿಡುಗಡೆಯಾಗಲಿದೆ. ಇನ್ನೂ ಈ ಸಿನಿಮಾದಲ್ಲಿ ರಗಡ್ ಹಾಗೂ ಮಾಸ್ ಲುಕ್‍ನಲ್ಲಿ ಯಶ್ ಕಾಣಿಸಿಕೊಂಡಿದ್ದು, ಯಶ್‍ಗೆ ಜೋಡಿಯಾಗಿ ಶ್ರೀನಿಧಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ, ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಬಾಲಿವುಡ್ ನಟ ಸಂಜಯ್ ದತ್, ರವೀನಾ ಟಂಡನ್, ಪ್ರಕಾಶ್ ರಾಜ್, ಮಾಳವಿಕ ಅವಿನಾಶ್ ಸೇರಿದಂತೆ ದೊಡ್ಡ ತಾರ ಬಳಗವೇ ಇರಲಿದೆ. ಇದನ್ನೂ ಓದಿ:  ಕೆಜಿಎಫ್-2ಗೆ ದೀಪಾ ಹೆಗ್ಡೆ ವಾಯ್ಸ್ ಡಬ್ಬಿಂಗ್ – ಫೋಟೋ ವೈರಲ್

The post ಕೆಜಿಎಫ್ ನಂತರ ನೌಕಾಧಿಕಾರಿ ಪಾತ್ರದಲ್ಲಿ ರಾಕಿಂಗ್ ಸ್ಟಾರ್ appeared first on Public TV.

Source: publictv.in

Source link