ದಾವಣಗೆರೆ: ಈಗ ಕೆಲವರು ಸೂಟು ಹೊಲಿಸಿ ಸಿಎಂ ಆಗುವ ತಿರುಕನ ಕನಸು ಕಾಣುತ್ತಿದ್ದಾರೆ. ಅವರ ಸೂಟು ಬೂಟು ಅವರ ಕ್ಷೇತ್ರದ ಜಾತ್ರೆಗಳಲ್ಲಿ ಹಾಕಿಕೊಳ್ಳಲಿ ಎಂದು ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟ ಕೋವಿಡ್ ಕೇರ್ ಸೆಂಟರ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸಿಎಂ ವಿರೋಧಿಗಳಿಗೆ ತಿರುಗೇಟು ನಿಡಿದ ಶಾಸಕರು, ಯಡಿಯೂರಪ್ಪ ಅವರ ಪರವಾಗಿ 65 ಶಾಸಕರ ಸಹಿ ಸಂಗ್ರಹಿಸಿದ್ದು ಸತ್ಯ. ಸಿಎಂ ಹಾಗೂ ಪಕ್ಷದ ವರಿಷ್ಠರು ಹೇಳಿದ್ದಕ್ಕೆ ಸುಮ್ನನಾಗಿದ್ದೇವೆ. ಈಗ ಕೆಲವರು ಸೂಟು ಹೊಲಿಸಿ ಸಿಎಂ ಆಗುವ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಬಿಎಸ್‍ವೈಯ ಸಿಎಂ ಸ್ಥಾನಕ್ಕೆ ಕಂಟಕ ಬರಬಾರದೆಂದು ಮಂಡ್ಯದಲ್ಲಿ ಈಡುಗಾಯಿ ಸೇವೆ

ಧಾರವಾಡ ಹಾಗೂ ವಿಜಯಪುರ ಶಾಸಕರು ಇಂತಹ ಇಂತಹ ಕನಸು ಕಾಣುತ್ತಿದ್ದಾರೆ. ಈಗಾಗಲೇ ನನಗೆ ಪಕ್ಷದ ರಾಜ್ಯ ಉಸ್ತುವಾರಿ ಸಮಯ ನೀಡಿದ್ದಾರೆ. ಮೇಲಾಗಿ ನಮ್ಮ ಎಲ್ಲ ಶಾಸಕರು ಒಟ್ಟಾಗಿ ಉಸ್ತುವಾರಿಗೆ ಮನವರಿಕೆ ಮಾಡಿ ಕೊಡುತ್ತೇವೆ. ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಸಾಧ್ಯವೇ ಇಲ್ಲ ಎಂದರು.

ಯಾರೋ ಇಬ್ಬರು ಮೂರು ಜನ ದೆಹಲಿಗೆ ಹೋಗಿ ವರಿಷ್ಠರ ಮನೆ ಗೇಟ್ ಮುಟ್ಟಿ ಬಂದರೆ ಬದಲಾವಣೆ ಅಸಾಧ್ಯ. ಬದಲಾವಣೆ ಪ್ರಶ್ನೆಯೇ ತಿರುಕನ ಕನಸು ಕಾಣುತ್ತಿರುವುದು ವಿಚಿತ್ರವಾಗಿದೆ ಎಂದು ರೇಣುಕಾಚಾರ್ಯ ಟಾಂಗ್ ಕೊಟ್ಟರು. ಇದನ್ನೂ ಓದಿ: ಆರೋಗ್ಯ ತಪಾಸಣೆಗಾಗಿ ಅಮೆರಿಕಾಗೆ ತೆರಳಿದ ತಲೈವಾ

ಇಂದು ಅರುಣ್ ಸಿಂಗ್ ಆಗಮನ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿಯಾಗುತ್ತಿದ್ದಾರೆ. ಶಾಸಕ ರಾಜುಗೌಡ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಹಲವು ಶಾಸಕರು ಇಂದು ಸಿಎಂ ಅವರ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸುತ್ತಿದ್ದಾರೆ.

The post ಕೆಲವರು ಸೂಟು ಹೊಲಿಸಿ ಸಿಎಂ ಆಗುವ ತಿರುಕನ ಕನಸು ಕಾಣ್ತಿದ್ದಾರೆ: ರೇಣುಕಾಚಾರ್ಯ appeared first on Public TV.

Source: publictv.in

Source link