ಬೆಂಗಳೂರು: ಸಮಾಜ ಕಲ್ಯಾಣ ಖಾತೆ ಸಚಿವ ಬಿ.ಶ್ರೀರಾಮುಲು ಅವರ ಪಿಎ ರಾಜಣ್ಣ ಅವರನ್ನ ಪೊಲೀಸರು ಬಂಧಿಸಿದ್ದಾರೆ. ಇಲಾಖೆಯಲ್ಲಿ ಕೆಲಸ ಮಾಡಿಸಿ ಕೊಡ್ತೀನಿ ಎಂದು ನಂಬಿಸಿ ಮೋಸ ಮಾಡಿದ ಆರೋಪ ಮೇಲೆ ರಾಮುಲು ಪಿಎಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಅಲ್ಲದೇ ಹತ್ತಾರು ಮಂದಿಯಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿರುವ ಆರೋಪ ಸಂಬಂಧ ಎಫ್​ಐಆರ್​ ಕೂಡ ದಾಖಲಾಗಿತ್ತು. ಇದೀಗ ಪೊಲೀಸರು ಅವರನ್ನ ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಮೂಲಗಳ ಪ್ರಕಾರ ಕಳೆದ ಎರಡು ದಿನಗಳ ಹಿಂದೆಯೇ ರಾಜಣ್ಣ ಅವರನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

The post ಕೆಲಸ ಕೊಡಿಸೋದಾಗಿ ವಂಚನೆ ಆರೋಪ; ಸಚಿವ ಶ್ರೀರಾಮುಲು PA ಅರೆಸ್ಟ್ appeared first on News First Kannada.

Source: newsfirstlive.com

Source link