ವಿಜಯಪುರ: ರಸ್ತೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಮಹಿಳೆ ಮೇಲೆ ಲಾರಿ ಹರಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಿಡಗುಂದಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.

ನಿಡಗುಂದಿ ತಾಲೂಕಿನ ಮುದ್ದಾಪೂರ ಗ್ರಾಮದ ಲಕ್ಷ್ಮೀ ಬಿರಾದಾರ್ (45) ಸಾವನ್ನಪ್ಪಿದ ಕಾರ್ಮಿಕ ಮಹಿಳೆಯಾಗಿದ್ದು, ರಾಷ್ಟ್ರೀಯ ಹೆದ್ದಾರಿಯ ಎಡ ಬದಿ ರಸ್ತೆಯಲ್ಲಿ ದುರಸ್ತಿ ಕಾಮಗಾರಿಯಲ್ಲಿ ತೊಡಗಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಸೂಚನಾ ಫಲಕಕ್ಕೆ ಗುದ್ದಿ, ನೇರವಾಗಿ ಮಹಿಳೆ ಮೇಲೆ ಹರಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

The post ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಹರಿದ ಲಾರಿ.. ಸ್ಥಳದಲ್ಲೇ ಹಾರಿತು ಪ್ರಾಣಪಕ್ಷಿ appeared first on News First Kannada.

Source: newsfirstlive.com

Source link