ಕೇಂದ್ರದಿಂದ ಕರ್ನಾಟಕಕ್ಕೆ 12 ಸಾವಿರ ಕೋಟಿ ಸಾಲ; ಸದ್ಯದಲ್ಲೇ ಘೋಷಣೆ: ಸಿಎಂ ಬೊಮ್ಮಾಯಿ | CM Basavaraj Bommai says Central Government will give 12 thousand crore loan to Karnataka

ಕೇಂದ್ರದಿಂದ ಕರ್ನಾಟಕಕ್ಕೆ 12 ಸಾವಿರ ಕೋಟಿ ಸಾಲ; ಸದ್ಯದಲ್ಲೇ ಘೋಷಣೆ: ಸಿಎಂ ಬೊಮ್ಮಾಯಿ

ನಿರ್ಮಲಾ ಸೀತಾರಾಮನ್ ಮತ್ತು ಬಸವರಾಜ ಬೊಮ್ಮಾಯಿ

ದೆಹಲಿ: ಕರ್ನಾಟಕಕ್ಕೆ ಬರಬೇಕಾದ ಜಿಎಸ್ಟಿ ಪಾಲಿನ ಬಗ್ಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಳಿ ಮಾತುಕತೆ ನಡೆಸಿದ್ದೇನೆ. ನಬಾರ್ಡ್ ವತಿಯಿಂದ ರಾಜ್ಯಕ್ಕೆ ಹೆಚ್ಚಿನ ನೆರವಿಗೆ ಮನವಿ ಮಾಡಿದ್ದೇನೆ. ಈ ಯೋಜನೆಯಿಂದ ರಾಜ್ಯದ ಸಣ್ಣ ಕೈಗಾರಿಕೆ, ಕೃಷಿಕರಿಗೆ ಅನುಕೂಲವಾಗಲಿದೆ. ನವೆಂಬರ್ ಮೊದಲ ವಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿಗೆ ಆಗಮಿಸಲಿದ್ದಾರೆ. ಕೇಂದ್ರ ಸರ್ಕಾರ 12,000 ಕೋಟಿ ಹಣವನ್ನು ಕರ್ನಾಟಕಕ್ಕೆ ಸಾಲದ ರೂಪದಲ್ಲಿ ಒದಗಿಸಲಿದೆ, ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿಗೆ ಬಂದಾಗ ಈ ಘೋಷಣೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಎಂದು ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ತಿಳಿಸಿದರು.

ಇದನ್ನೂ ಓದಿ: 

TV9 Kannada

Leave a comment

Your email address will not be published. Required fields are marked *