ಕೇಂದ್ರದ ಅಗ್ನಿಪಥ್​​ ಯೋಜನೆ ವಿರುದ್ಧ ಬಿಹಾರದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಪೊಲೀಸರಿಂದ ಅಶ್ರುವಾಯು ಪ್ರಯೋಗ | Protests against Agnipath in Bihar turned violent Army aspirants disrupted rail Tear Gas Fired


ಕೇಂದ್ರದ ಅಗ್ನಿಪಥ್​​ ಯೋಜನೆ ವಿರುದ್ಧ ಬಿಹಾರದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಪೊಲೀಸರಿಂದ ಅಶ್ರುವಾಯು ಪ್ರಯೋಗ

ಬಿಹಾರದಲ್ಲಿ ಪ್ರತಿಭಟನೆ

ಅರ್ರಾದಲ್ಲಿರುವ ರೈಲು ನಿಲ್ದಾಣದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಪ್ರತಿಭಟನಾಕಾರರ ಬೃಹತ್ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ.

ಪಟನಾ: ಸೇನಾ ಆಕಾಂಕ್ಷಿಗಳು ಸತತ ಎರಡನೇ ದಿನವೂ ಬಿಹಾರದ (Bihar) ಹಲವು ಭಾಗಗಳಲ್ಲಿ ರೈಲು ಮತ್ತು ರಸ್ತೆ ಸಂಚಾರಕ್ಕೆ ಅಡ್ಡಿಪಡಿಸಿದ್ದರಿಂದ ಸಶಸ್ತ್ರ ಪಡೆಗಳ ಆಮೂಲಾಗ್ರ ನೇಮಕಾತಿ ಯೋಜನೆಯಾದ ಅಗ್ನಿಪಥ್ (Agnipath) ವಿರುದ್ಧದ ಪ್ರತಿಭಟನೆಗಳು ಇಂದು ಹಿಂಸಾಚಾರಕ್ಕೆ (violent) ತಿರುಗಿದವು. ಲಾಠಿ ಹಿಡಿದ ಪ್ರತಿಭಟನಾಕಾರರು ಭಭುವಾ ರೋಡ್ ರೈಲು ನಿಲ್ದಾಣದಲ್ಲಿ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿನ ಗಾಜುಗಳನ್ನು ಒಡೆದು ಒಂದು ಕೋಚ್‌ಗೆ ಬೆಂಕಿ ಹಚ್ಚಿದರು. ಪ್ರತಿಭಟನಾಕಾರರು  Indian Army lovers ಎಂಬ ಬ್ಯಾನರ್ ಹಿಡಿದುಕೊಂಡು ಹೊಸ ನೇಮಕಾತಿ ಯೋಜನೆಯನ್ನು ತಿರಸ್ಕರಿಸಿ ಘೋಷಣೆಗಳನ್ನು ಕೂಗಿದ್ದಾರೆ. ಅರ್ರಾದಲ್ಲಿರುವ ರೈಲು ನಿಲ್ದಾಣದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಪ್ರತಿಭಟನಾಕಾರರ ಬೃಹತ್ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಪ್ರತಿಭಟನಾಕಾರರು ಹಳಿಗಳ ಮೇಲೆ ಪೀಠೋಪಕರಣಗಳನ್ನು ಎಸೆದು ಬೆಂಕಿ ಹಚ್ಚಿದ್ದರಿಂದ ಉಂಟಾದ ಬೆಂಕಿಯನ್ನು ನಂದಿಸಲು ರೈಲ್ವೆ ಸಿಬ್ಬಂದಿ ಅಗ್ನಿಶಾಮಕಗಳನ್ನು ಬಳಸಿದ್ದಾರೆ. ಜೆಹಾನಾಬಾದ್‌ನಲ್ಲಿ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದು, ರೈಲು ಸಂಚಾರಕ್ಕೆ ಅಡ್ಡಿಪಡಿಸಲು ಅವರು ಕ್ಯಾಂಪ್ ಮಾಡಿದ್ದ ರೈಲ್ವೆ ಹಳಿಗಳನ್ನು ತೆರವುಗೊಳಿಸುವ ವೇಳೆ ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಮತ್ತು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಪರಸ್ಪರ ಕಲ್ಲು ತೂರಾಟ ನಡೆಸಿದ್ದು, ಪ್ರತಿಭಟನಾಕಾರರನ್ನು ಹೆದರಿಸಲು ಪೊಲೀಸರು ತಮ್ಮ ಬಂದೂಕುಗಳನ್ನು ತೋರಿಸಿದ್ದಾರೆ.

(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)

TV9 Kannada


Leave a Reply

Your email address will not be published.