ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ಸಚಿವೆ ಶೋಭಾ ಕರಂದ್ಲಾಜೆ | Union minister of state Shobha Karandlaje met union home minister Amit Shah


ಕೇರಳದ ತೀವ್ರಗಾಮಿ ಇಸ್ಲಾಮಿಸ್ಟ್ ಗುಂಪುಗಳು ಕರ್ನಾಟಕದಲ್ಲಿನ ಸಂಘ ಮತ್ತು ಬಿಜೆಪಿ ಕಾರ್ಯಕರ್ತರ ವಿರುದ್ಧ ಘೋರ ಅಪರಾಧಗಳನ್ನು ಎಸಗಲು ಮಂಗಳೂರಿನಂತಹ ಪ್ರದೇಶಗಳಿಗೆ ಹೇಗೆ ನುಗ್ಗಿವೆ ಎಂಬುದರ ಬಗ್ಗೆ ಶೋಭಾ ಅಮಿತ್ ಶಾರಿಗೆ ವಿವರಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ಸಚಿವೆ ಶೋಭಾ ಕರಂದ್ಲಾಜೆ

TV9kannada Web Team

| Edited By: Rashmi Kallakatta

Aug 02, 2022 | 6:27 PM
ದೆಹಲಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ಒಪ್ಪಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ  ಕರಂದ್ಲಾಜೆ ಧನ್ಯವಾದ ಅರ್ಪಿಸಿದ್ದಾರೆ. ಇದಕ್ಕಿಂತ ಮುಂಚೆ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಕರಂದ್ಲಾಜೆ ಅವರು ಶಾ ಅವರಿಗೆ ಪತ್ರ ಬರೆದಿದ್ದರು. ಅಮಿತ್ ಶಾ ಅವರನ್ನು ಭೇಟಿಯಾದ ಶೋಭಾ ಕೇರಳದ ಗಡಿಭಾಗ ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ತಿಳಿಸಿದ್ದಾರೆ . ಕೇರಳದ ತೀವ್ರಗಾಮಿ ಇಸ್ಲಾಮಿಸ್ಟ್ ಗುಂಪುಗಳು ಕರ್ನಾಟಕದಲ್ಲಿನ ಸಂಘ ಮತ್ತು ಬಿಜೆಪಿ ಕಾರ್ಯಕರ್ತರ ವಿರುದ್ಧ ಘೋರ ಅಪರಾಧಗಳನ್ನು ಎಸಗಲು ಮಂಗಳೂರಿನಂತಹ ಪ್ರದೇಶಗಳಿಗೆ ಹೇಗೆ ನುಗ್ಗಿವೆ ಎಂಬುದರ ಬಗ್ಗೆ ಶೋಭಾ ಅಮಿತ್ ಶಾರಿಗೆ ವಿವರಿಸಿದ್ದಾರೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published. Required fields are marked *