ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾ ಅರೆಸ್ಟ್​

ಲಖನೌ: ಅಕ್ಟೋಬರ್ 3 ರಂದು ನಡೆದ ಲಖೀಂಪುರ ದುರಂತಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾನನ್ನ ಉತ್ತರಪ್ರದೇಶದ ಪೊಲೀಸರು ಬಂಧಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಇಂದು ಎಸ್​ಐಟಿ ಆಶಿಶ್ ಮಿಶ್ರಾನನ್ನು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿತ್ತು. ಈ ಹಿನ್ನೆಲೆ ಇಂದು ಆಶಿಶ್ ಮಿಶ್ರಾ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಪೊಲೀಸರು ಆಶಿಶ್ ಮಿಶ್ರಾನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಸುದೀರ್ಘ ವಿಚಾರಣೆಯ ನಂತರ ಆಶಿಶ್ ಮಿಶ್ರಾನನ್ನ ಬಂಧಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಘಟನೆಗೆ ಸಂಬಂಧಿಸಿದಂತೆ ನಡೆದ ವಿಚಾರಣೆಯಲ್ಲಿ ಘಟನೆಯ ದಿನ ನೀವು ಎಲ್ಲಿದ್ದಿರಿ..? ನಿಮ್ಮ ವಿರುದ್ಧ ಕೇಳಿಬಂದ ಆರೋಪಗಳು ನಿಜವೇ ಎಂದು ಪ್ರಶ್ನಿಸಿದ್ದರು ಎಂಬ ಮಾಹಿತಿ ಇದೆ. ಸುಪ್ರೀಂಕೋರ್ಟ್ ಈ ವಿಚಾರವಾಗಿ ಸುವೋಮೋಟೋ ಕೇಸ್ ದಾಖಲಿಸಿಕೊಂಡು ಆಶಿಶ್ ಮಿಶ್ರಾನನ್ನು ಬಂಧಿಸದ ಹಿನ್ನೆಲೆ ಅಸಮಾಧಾನ ಹೊರಹಾಕಿತ್ತು. ಅಲ್ಲದೇ ಯುಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಬಂಧಿಸಲಾಗಿದೆ.

News First Live Kannada

Leave a comment

Your email address will not be published. Required fields are marked *