ಬೆಂಗಳೂರು: ಬ್ರಹ್ಮರ್ಷಿ ನಾರಾಯಣ ಗುರುಗಳ ಚಿತ್ರವಿದ್ದ ಸ್ತಬ್ಧಚಿತ್ರವನ್ನು ಕೇಂದ್ರದ ಗಣರಾಜ್ಯೋತ್ಸವ ಸಮಿತಿ ತಿರಸ್ಕಾರ ಖಂಡಿಸಿ, ಮಾಜಿ ಸಿಎಂಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿ ಕಿಡಿಕಾರಿದ ಅವರು ಗಣರಾಜ್ಯೋತ್ಸವ ಪರೇಡ್ನಲ್ಲಿ ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದು, ತಳಸಮುದಾಯದ ಮಹಾಪುರುಷರ ಬಗ್ಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಇರುವ ಪೂರ್ವಗ್ರಹ ಮತ್ತು ತಿರಸ್ಕಾರಕ್ಕೆ ಸಾಕ್ಷಿಯಾಗಿದೆ.ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಯಾವ ಕಾರಣಕ್ಕಾಗಿ ಅವಕಾಶ ನಿರಾಕರಿಸಲಾಗಿದೆ? ನಾರಾಯಣ ಗುರುಗಳು ಹಿಂದೂ ಧರ್ಮಕ್ಕೆ ಸೇರಿದವರಲ್ಲವೇ? ಅಂತಹ ಅಭಿಪ್ರಾಯವನ್ನು ಬಿಜೆಪಿಗರು ಹೊಂದಿದ್ದರೆ ಹಾಗೆಂದು ಮುಕ್ತವಾಗಿ ಹೇಳುವ ಧೈರ್ಯ ತೋರಲಿ ಎಂದಿ ಸಿದ್ದರಾಮಯ್ಯ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾರಾಯಣ
ಗುರುಗಳಿಗೆ
ಮಾಡಿರುವ ಅವಮಾನಕ್ಕಾಗಿ ಕೇಂದ್ರದ@BJP4India ಸರ್ಕಾರ
ದೇಶದ
ಕ್ಷಮೆ ಕೇಳಬೇಕು.ಈ ಬಾರಿಯ ಗಣರಾಜ್ಯೋತ್ಸವದಲ್ಲಿ ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಪ್ರಾಧಾನ್ಯ ಕೊಟ್ಟು ಅವಕಾಶ ನೀಡಬೇಕು.#Insult_to_NarayanaGuru
7/7 pic.twitter.com/6rYdmgAR06— Siddaramaiah (@siddaramaiah) January 16, 2022
ನಾನು ಮುಖ್ಯಮಂತ್ರಿಯಾಗಿದ್ದಾಗ ನಾರಾಯಣ ಗುರುಗಳ ಜಯಂತಿಯನ್ನು ರಾಜ್ಯ ಸರ್ಕಾರವೇ ಅಧಿಕೃತವಾಗಿ ಆಚರಿಸಬೇಕೆಂಬ ನಿರ್ಧಾರ ಕೈಗೊಂಡೆ. ಇದರಿಂದಾಗಿ ಇಂದು ರಾಜ್ಯದ ಮೂಲೆಮೂಲೆಗೆ ಗುರುಗಳ ಚಿಂತನೆಯ ಸಂದೇಶ ತಲುಪುತ್ತಿದೆ ಎಂಬ ಹೆಮ್ಮೆ ಮತ್ತು ತೃಪ್ತಿ ನನ್ನದು. ತಮ್ಮ ಮೂಗಿನಡಿಯಲ್ಲಿಯೇ ನಾರಾಯಣ ಗುರುಗಳಿಗೆ ಮಾಡಿರುವ ಅವಮಾನದ ಬಗ್ಗೆ ಪ್ರಧಾನಿ ಇನ್ನೂ ಪ್ರತಿಕ್ರಿಯಿಸದೆ ಇರುವುದು ಆಶ್ಚರ್ಯಕರ. ಇದನ್ನು ಹೇಗೆ ಅರ್ಥೈಸಬೇಕು? ಕೂಡಲೇ ಕೇಂದ್ರ ಸರ್ಕಾರ ಈ ಕುರಿತು ದೇಶದ ಜನರ ಕ್ಷಮೆ ಕೇಳಬೇಕೆಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.