ಕೇರಳದಲ್ಲಿ ಮುಂದುವರಿದ ಮಳೆ; 10 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ | Rains continue to lash Kerala IMD issues Red alert in 10 districts


ಇಂದು (ಆಗಸ್ಟ್ 2)ರಂಂದು  ಆಲಪ್ಪುಳ, ಕೋಟ್ಟಯಂ, ಇಡುಕ್ಕಿ, ಎರ್ನಾಕುಳಂ, ತ್ರಿಶ್ಶೂರ್, ಪಾಲಕ್ಕಾಡ್, ಮಲಪ್ಪುಂ, ಕೋಯಿಕ್ಕೋಡ್, ವಯನಾಡ್, ಕಣ್ಣೂರ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಕೇರಳದಲ್ಲಿ ಮುಂದುವರಿದ ಮಳೆ; 10 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಕೇರಳದಲ್ಲಿ ಮಳೆ

ಕೇರಳದಲ್ಲಿ ಮಳೆ (Kerala Rains) ಅಬ್ಬರ ಮುಂದುವರಿದಿದ್ದು ರಾಜ್ಯದ ವಿವಿಧ ಪ್ರದೇಶಗಳಲ್ಲಿ ನದಿ ಉಕ್ಕಿ ಹರಿದಿದೆ. ಹಲವೆಡೆ ಭ ಕುಸಿತವುಂಟಾಗಿದ್ದು ಭಾರತೀಯ ಹವಾಮಾನ ಇಲಾಖೆ (IMD) ಮಂಗಳವಾರ 10 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ (Red Alert) ಘೋಷಿಸಿದೆ. ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ ಮತ್ತು ಕಾಸರಗೋಡಿನಲ್ಲಿ ಆಗಸ್ಟ್ 2 ಮತ್ತು 3ರಂದು ಆರೆಂಜ್ ಅಲರ್ಟ್ ಘೋಷಿಸಿದ್ದು, ಇನ್ನುಳಿದ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 5ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ವಿವಿಧ ಜಿಲ್ಲೆ ಮತ್ತು ಪ್ರವಾಸಿ ತಾಣಗಳಲ್ಲಿ ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ. ಇಡುಕ್ಕಿಯ ಹೈರೇಂಜ್ ಪ್ರದೇಶಗಳಲ್ಲಿರುವ ಪ್ರವಾಸಿ ತಾಣಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ, ರಾಜ್ಯದಾದ್ಯಂತ 757 ಮಂದಿಯನ್ನು ಸಂತ್ರಸ್ತರ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ.

ಇಂದು (ಆಗಸ್ಟ್ 2)ರಂಂದು  ಆಲಪ್ಪುಳ, ಕೋಟ್ಟಯಂ, ಇಡುಕ್ಕಿ, ಎರ್ನಾಕುಳಂ, ತ್ರಿಶ್ಶೂರ್, ಪಾಲಕ್ಕಾಡ್, ಮಲಪ್ಪುಂ, ಕೋಯಿಕ್ಕೋಡ್, ವಯನಾಡ್, ಕಣ್ಣೂರ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಕೇರಳ  ಸರ್ಕಾರ ಟ್ವೀಟ್ ಮಾಡಿದೆ .

ತಾಜಾ ಸುದ್ದಿ

TV9 Kannada


Leave a Reply

Your email address will not be published. Required fields are marked *