ಮಂಗಳೂರು: ಕೇರಳದಲ್ಲಿ ಕೊರೊನಾ ಡೆಲ್ಟಾ ಪ್ಲಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ನೆರೆಯ ದಕ್ಷಿಣ ಕನ್ನಡ ಜಿಲ್ಲೆಗೂ ಭೀತಿ ಹೆಚ್ಚಾಗಿದೆ.

ಕೇರಳದಿಂದ ಪ್ರತಿನಿತ್ಯ ಸಾವಿರಾರು ಮಂದಿ ದಕ್ಷಿಣ ಕನ್ನಡ ಜಿಲ್ಲೆಗೆ ವ್ಯಾಪಾರ, ಉದ್ಯೋಗಕ್ಕಾಗಿ ಬಂದು ಹೋಗುತ್ತಾರೆ. ಹೀಗಾಗಿ ಜಿಲ್ಲೆಯ ಜನತೆಗೆ ಭೀತಿ ಹೆಚ್ಚಾಗಿದ್ದು, ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇಂದು ಜಿಲ್ಲೆಯಲ್ಲಿ ವೀಕೆಂಡ್ ಕಫ್ರ್ಯೂ ಜಾರಿ ಇರುವ ಹಿನ್ನಲೆಯಲ್ಲಿ ಗಡಿ ಭಾಗದಲ್ಲಿ ಹೆಚ್ಚಿನ ವಾಹನ ಓಡಾಟ ಇಲ್ಲ. ಜೊತೆಗೆ ತಪಾಸಣೆಯೂ ಇಲ್ಲ. ಆದರೆ ಸೋಮವಾರದ ಬಳಿಕ ಮತ್ತೆ ಅನ್‍ಲಾಕ್ ಆಗುವುದರಿಂದ ಗಡಿಯಲ್ಲಿ ಜನರ ಓಡಾಟ ಹೆಚ್ಚಾಗುತ್ತದೆ. ಡೆಲ್ಟಾ ಪ್ಲಸ್ ಸೋಂಕಿನ ಸಂಖ್ಯೆಯೂ ಹೆಚ್ಚಾಗುತ್ತಿರುವುದರಿಂದ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

The post ಕೇರಳದಲ್ಲಿ ಹೆಚ್ಚುತ್ತಿವೆ ಡೆಲ್ಟಾ ಪ್ಲಸ್ ಕೇಸ್- ಮಂಗಳೂರಿಗರಲ್ಲಿ ಆತಂಕ appeared first on Public TV.

Source: publictv.in

Source link