ಕೇರಳ: ಕೇರಳದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಝೀಕಾ ವೈರಸ್​ ದೊಡ್ಡ ಆತಂಕ ಸೃಷ್ಟಿ ಮಾಡಿದೆ. ದಿನದಿಂದ ದಿನಕ್ಕೆ ಝೀಕಾ ವೈರಸ್​ನ ಸೋಂಕು ಹೆಚ್ಚಳವಾಗುತ್ತಿದ್ದು, ಮತ್ತೆ ಐವರಲ್ಲಿ ದೃಢಪಟ್ಟಿದೆ.

ಈ ಮೂಲಕ ಕೇರಳದಲ್ಲಿ ಝೀಕಾ ಸೋಂಕಿತರ ಒಟ್ಟು ಸಂಖ್ಯೆ 28ಕ್ಕೆ ಏರಿಕೆಯಾದಂತಾಗಿದೆ. 7 ಮಂದಿ ಮಹಿಳೆಯರು, 2 ವರ್ಷದ ಮಗು ಸೇರಿ ಒಟ್ಟು 28 ಜನರಲ್ಲಿ ವೈರಸ್ ಪತ್ತೆಯಾಗಿದೆ. ಇನ್ನು ಹೊಸ ಪ್ರಕರಣಗಳಲ್ಲಿ ಇಬ್ಬರು ಅನಾಯರಾ ಪ್ರದೇಶದ ಮೂಲದವರಾಗಿದ್ದು, ಮೂರು ಕಿಲೋ ಮೀಟರ್ ವ್ಯಾಪ್ತಿಯಲ್ಲಿಯೇ ರೋಗದ ಕ್ಲಸ್ಟರ್‌ ಗುರುತಿಸಲಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್‌ ತಿಳಿಸಿದ್ದಾರೆ.

ಮಂಗಳೂರಲ್ಲಿ ಹೈ-ಅಲರ್ಟ್​
ಸೋಂಕು ಹರಡುವುದನ್ನು ತಡೆಯಲು ಈ ಪ್ರದೇಶದಲ್ಲಿ ಸೊಳ್ಳೆಗಳನ್ನು ನಾಶಪಡಿಸಲು ಆರೋಗ್ಯ ಇಲಾಖೆ ಕಟ್ಟು ನಿಟ್ಟಿನ ಕ್ರಮಕೈಗೊಂಡಿದೆ ಎಂದು ತಿಳಿಸಿದ್ದಾರೆ. ಇನ್ನು ಕೇರಳ ಗಡಿ ಭಾಗದ ರಾಜ್ಯದ ಜಿಲ್ಲೆಗಳಲ್ಲಿ ಭೀತಿ ಶುರುವಾಗಿದೆ.

ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಕೇರಳದಿಂದ ಜಿಲ್ಲೆಗೆ ಆಗಮಿಸುತ್ತಿರುವವರ ಮೇಲೆ ತೀವ್ರ ನಿಗಾ ಇಡುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಆದೇಶ ಮಾಡಿದ್ದಾರೆ. ಜಿಲ್ಲೆಯಲ್ಲಿ ಜ್ವರದಿಂದ ಬಳಲುತ್ತಿರುವವರ ಬಗ್ಗೆ ಕೂಡಲೇ ಮಾಹಿತಿ ಕಲೆ ಹಾಕಿ. ಜಿಲ್ಲೆಯ ಎಲ್ಲಾ ಸ್ಕ್ಯಾನಿಂಗ್ ಹಾಗು ಹೆರಿಗೆ ಆಸ್ಪತ್ರೆಗಳಿಗೆ ಬರುವ ಗರ್ಭಿಣಿಯರ ಬಗ್ಗೆ ನಿಗಾ ಇಡಿ ಎಂದು ಸೂಚಿಸಿದ್ದಾರೆ.

The post ಕೇರಳದಲ್ಲಿ 28ಕ್ಕೆ ಏರಿದ ಝೀಕಾ ವೈರಸ್​ ಪ್ರಕರಣ; ಮಂಗಳೂರಲ್ಲಿ ಹೈ-ಅಲರ್ಟ್​ appeared first on News First Kannada.

Source: newsfirstlive.com

Source link