ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮುಂದುವರೆದಿದ್ದು, ಕಾಡಾನೆಯ ದಾಳಿಗೆ ವ್ಯಕ್ತಿಯೋರ್ವರು ತೀವ್ರವಾಗಿ ಗಾಯಗೊಂಡ ಘಟನೆ ವಿರಾಜಪೇಟೆ ತಾಲೂಕಿನ ಕಳತ್ಮಾಡು ಗ್ರಾಮದಲ್ಲಿ ಸಂಭವಿಸಿದೆ.
ಹೊಸೊಕ್ಲು ಮಾಚಯ್ಯ (65) ಎಂಬುವರ ಮೇಲೆ ಕಾಡಾನೆ ದಾಳಿ ನಡೆಸಿದೆ. ಪರಿಣಾಮ ಮಾಚಯ್ಯ ಅವರ ಎರಡು ಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ಸದ್ಯ ಗಾಯಾಳುವನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.