ಕೊಡಗು: ಕಿರು ಹೊಳೆಯಲ್ಲಿ ಅಂಗವಿಕಲ ವ್ಯಕ್ತಿ ಕೊಚ್ಚಿ ಹೋಗಿರುವ ಘಟನೆ ಮಡಿಕೇರಿ ತಾಲೂಕಿನ ಅವ್ವಂದೂರು ಗ್ರಾಮದಲ್ಲಿ ನಡೆದಿದೆ.

ಬೊಮ್ಮೇಗೌಡನ ಬಾಬಿ (70) ಹೊಳೆಯಲ್ಲಿ ಕೊಚ್ಚಿ ಹೋದ ಅಂಗವಿಕಲ ವ್ಯಕ್ತಿಯಾಗಿದ್ದು, ಭಾರೀ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಕಿರು ಹೊಳೆಯನ್ನು ದಾಟುವಾಗ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಭೇಟಿ ನೀಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಕಾರ್ಯಾಚರಣೆ ನಡೆಸಲು ಅಡ್ಡಿ ಎದುರಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

The post ಕೊಡಗು; ಕಿರು ಹೊಳೆಯಲ್ಲಿ ಕೊಚ್ಚಿ ಹೋದ ಅಂಗವಿಕಲ appeared first on News First Kannada.

Source: newsfirstlive.com

Source link