ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಭೂಕುಸಿತದ ಆತಂಕ ಹಿನ್ನೆಲೆ ಇಂದು ಮತ್ತು ನಾಳೆ ರಾತ್ರಿ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಆದೇಶ ಹೊರಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಭೂಕುಸಿತ
ಕೊಡಗು: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಭೂಕುಸಿತದ ಆತಂಕ ಹಿನ್ನೆಲೆ ಇಂದು ಮತ್ತು ನಾಳೆ ರಾತ್ರಿ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಆದೇಶ ಹೊರಡಿದ್ದಾರೆ. ರಾತ್ರಿ 9 ರಿಂದ ಬೆಳಗ್ಗೆ 6.30ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ಮದೆನಾಡು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಬಿರುಕು ಬಿಟ್ಟಿದೆ. ಈ ಸಂಬಂಧ ಮಡಕೇರಿಯಿಂದ ಮಂಗಳೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸಂಚಾರ ನಿಷೇಧಿಸಲಾಗಿದೆ. ಕೊಡಗು ಜಿಲ್ಲಾಡಳಿತ ನಿನ್ನೆಯೂ (ಆಗಸ್ಟ್ 9) ರಂದು ಕೂಡ ಸಂಚಾರ ನಿರ್ಬಂಧಿಸಿತ್ತು.