ಇಂದು ದುಂಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರೋ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ಮತ್ತು ಸ್ಕಾಟ್ಲೆಂಡ್ ತಂಡಗಳು ಮುಖಾಮುಖಿಯಾಗುತ್ತಿವೆ. ಕಳೆದ ನಾಲ್ಕು ಪಂದ್ಯಗಳಲ್ಲಿ ಮೊದಲ ಬಾರಿಗೆ ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಆಯ್ದುಕೊಂಡಿದೆ.
ಸತತ ಎರಡು ಸೋಲಿನ ಬಳಿಕ ಭಾರತ ಅಫ್ಘಾನ್ ವಿರುದ್ಧ ಗೆದ್ದು ಬೀಗಿತ್ತು. ಈಗಾಗಲೇ ಟೂರ್ನಿಯಿಂದ ಹೊರಗುಳಿದಿರುವ ಭಾರತಕ್ಕೆ ಕೊನೆಯ ಪಂದ್ಯದವರೆಗೂ ಹೋರಾಟ ಮುಂದುವರಿಸುವುದು ಅನಿವಾರ್ಯ. ಇಂದಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಗೆಲ್ಲಲೇಬೇಕು.