
ಇಂದ್ರಕಿಲಾ ಬೆಟ್ಟದ ವ್ಯಾಪ್ತಿಯಲ್ಲಿ ಅನಧಿಕೃತ ಕಲ್ಲು ಗಣಿಗಾರಿಕೆ
ರಿಯಲ್ ಎಸ್ಟೇಟ್ ಹೆಸರಿನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿಯಮಗಳನ್ನು ಗಾಳಿಗೆ ತೂರಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಕೆ.ಎಂ ಸೈಯದ್ ಕಲ್ಲು ಗಣಿಗಾರಿಕೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪತ್ನಿ ಸಿಮ್ರಾನ್ ಸೈಯದ್ ವಿರುದ್ಧ ಕೊಪ್ಪಳ ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಪ್ಪಳ: ಕೊಪ್ಪಳದ ಗದಗ ರಸ್ತೆಯ ಇಂದ್ರಕಿಲಾ ಬೆಟ್ಟದ ವ್ಯಾಪ್ತಿಯಲ್ಲಿ ಅನಧಿಕೃತ ಕಲ್ಲು ಗಣಿಗಾರಿಕೆ ಆರೋಪ ಕೇಳಿ ಬಂದಿದ್ದು ಕಾಂಗ್ರೆಸ್ ಮುಖಂಡ ಕೆ.ಎಂ ಸೈಯದ್ ಪತ್ನಿ ವಿರುದ್ಧ ದೂರು ದಾಖಲಾಗಿದೆ. ಕಾಂಗ್ರೆಸ್ ಮುಖಂಡ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಯಿಂದ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಆರೋಪವಿದ್ದು ಪತಿ ಮಾಡಿದ ತಪ್ಪಿಗೆ ಪತ್ನಿ ವಿರುದ್ಧ ಪ್ರಕರಣ ದಾಖಲಾಗಿದೆ.
ರಿಯಲ್ ಎಸ್ಟೇಟ್ ಹೆಸರಿನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿಯಮಗಳನ್ನು ಗಾಳಿಗೆ ತೂರಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಕೆ.ಎಂ ಸೈಯದ್ ಕಲ್ಲು ಗಣಿಗಾರಿಕೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪತ್ನಿ ಸಿಮ್ರಾನ್ ಸೈಯದ್ ವಿರುದ್ಧ ಕೊಪ್ಪಳ ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಲ್ಪಾ ಗ್ರ್ಯಾಂಡ್ ಹೋಟೆಲ್ ಹಿಂಭಾಗ ಸರ್ವೇ ನಂಬರ್ 656 ರಲ್ಲಿ ಅನಧಿಕೃತ ಗಣಿಗಾರಿಕೆ, ಕಲ್ಲು ಬ್ಲಾಸ್ಟಿಂಗ್ ಮಾಡಿರುವ ಆರೋಪದಡಿ ಎಫ್ಐಆರ್ ದಾಖಲಾಗಿದೆ.