ಬೆಂಗಳೂರು: ಕೊರೊನಾದಿಂದ ಮರಣ ಹೊಂದಿದ ಪೋಷಕರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತೇವೆ ಅಂತಾ ರುಪ್ಸಾ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ಘೋಷಣೆ ಮಾಡಿದ್ದಾರೆ.

ಕರ್ನಾಟಕ ಖಾಸಗಿ ಶಾಲಾ-ಕಾಲೇಜು ಆಡಳಿತ ಮಂಡಳಿ ಒಕ್ಕೂಟ ಇಂದು ಸುದ್ದಿಗೋಷ್ಠಿ ನಡೆಸಿತು. ಈ ವೇಳೆ ಮಾತನಾಡಿರುವ ಲೋಕೇಶ್ ತಾಳಿಕಟ್ಟೆ, ಕೊರೊನಾ ಸೋಂಕಿನಿಂದ ಮೃತರಾದ ಪೋಷಕರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತೇವೆ. ನಮ್ಮ ಸಂಘಟನೆ ಅಡಿಯಲ್ಲಿ ಬರುವ ಶಾಲೆಗಳಲ್ಲಿ ಉಚಿತ ಶಿಕ್ಷಣ ನೀಡಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.

12 ಸಂಘಟನೆಗಳಿಂದ ಇಂದು ಸುದ್ದಿಗೋಷ್ಠಿ ನಡೆಯುತ್ತಿದೆ. ಖಾಸಗಿ ಶಾಲೆಗಳು, ಪಿಯು, ಪದವಿ ಕಾಲೇಜಿನ ಅನೇಕ ಪ್ರತಿನಿಧಿಗಳು ಭಾಗಿಯಾಗಿದ್ದಾರೆ. ಅನೇಕ ಸಿಬಿಎಸ್ಸಿ, ಐಸಿಎಸ್ಸಿ ಶಾಲಾ ಕಾಲೇಜಿನ ಪ್ರಮುಖರು ಭಾಗಿಯಾಗಿದ್ದಾರೆ. ಸರ್ಕಾರಕ್ಕೆ ಒತ್ತಾಯ ಮಾಡುವ ಹಲವು ವಿಷಯಗಳನ್ನು ಚರ್ಚೆ ಮಾಡಿದ್ದೇವೆ. ಒಟ್ಟು 12 ಸಂಘಟನೆಗಳಿಂದ 10,166 ಶಾಲಾ-ಕಾಲೇಜುಗಳು ನೊಂದಣಿ ಆಗಿದೆ ಎಂದರು. ಇದೇ ವೇಳೆ ಖಾಸಗಿ ಶಾಲೆಗಳ ಶುಲ್ಕದ ವಿಚಾರದ ಬಗ್ಗೆ ಮಾತನಾಡಿದ ಅವರು.. ಸರ್ಕಾರದ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ. ಸರ್ಕಾರ ನಿಗದಿ ಮಾಡುವ ಶುಲ್ಕ ಸ್ವೀಕರಿಸಲು ನಾವು ಸಿದ್ಧರಿದ್ದೇವೆ ಎಂದರು.

ಇನ್ನು ಎಸ್.ಮುನಿಯಪ್ಪ, ಡಾ.ಇಕ್ಬಾಲ್, ಸುಮಂತ್ ನಾರಾಯಣ್, ನಾರಾಯಣ್ ದೇಶಪಾಂಡೆ, ಇಮಾಯಲ್ ಸೇರಿದಂತೆ ವಿವಿಧ ಖಾಸಗಿ ಶಾಲಾ-ಕಾಲೇಜುಗಳ ಒಕ್ಕೂಟದ ಪ್ರತಿನಿಧಿಗಳು ಭಾಗಿಯಾಗಿದ್ದರು.

The post ಕೊರೊನಾದಿಂದ ಅನಾಥರಾದ ಮಕ್ಕಳಿಗೆ ಉಚಿತ ಶಿಕ್ಷಣ -ರುಪ್ಸಾ ಘೋಷಣೆ appeared first on News First Kannada.

Source: newsfirstlive.com

Source link