ನವದೆಹಲಿ: ಕೊರೊನಾದಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ ಹಿನ್ನೆಲೆ ಮೃತರ ಕುಟುಂಬಸ್ಥರು ವೈದ್ಯರ ಮೇಲೆ ಹಲ್ಲೆ ನಡೆಸಿದ ಘಟನೆ ದೆಹಲಿಯ ಅಪೊಲೋ ಆಸ್ಪತ್ರೆಯ ಬಳಿ ನಡೆದಿದೆ.

ಕೊರೊನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮಹಿಳೆಯ ಸಾವನ್ನು ಸಹಿಸದ ಕುಟುಂಬಸ್ಥರು ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಆಸ್ಪತ್ರೆಯ ಆಸ್ತಿಗೆ ಹಾನಿ ಮಾಡಿದ್ದಾರೆ ಎನ್ನಲಾಗಿದೆ. ಘಟನೆಯನ್ನು ನಿಯಂತ್ರಣಕ್ಕೆ ತರಲು ಪೊಲೀಸರಿಗೆ ಕರೆ ಮಾಡಲಾಗಿದ್ದು ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ಇನ್ನು ಈ ವಿಡಿಯೋವನ್ನು ಇಂಗ್ಲಿಷ್ ಮಾಧ್ಯಮ ಪತ್ರಕರ್ತ ಶಿವ್ ಅರೂರ್ ಅವರು ಟ್ವೀಟ್ ಮಾಡಿದ್ದಾರೆ.

The post ಕೊರೊನಾದಿಂದ ಮಹಿಳೆ ಸಾವು.. ವೈದ್ಯರು, ಸಿಬ್ಬಂದಿ ಮೇಲೆ ಕುಟುಂಬದವರಿಂದ ಹಲ್ಲೆ appeared first on News First Kannada.

Source: newsfirstlive.com

Source link