ಹಾವೇರಿ: ಜಿಲ್ಲೆಯ ಹಿರೇಕೆರೂರು ಮತ್ತು ರಟ್ಟಿಹಳ್ಳಿ ತಾಲೂಕಿನಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ವೈಯಕ್ತಿಕವಾಗಿ 50 ಸಾವಿರ ರೂ. ಪರಿಹಾರ ನೀಡುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ ಘೋಷಣೆ ಮಾಡಿದ್ದಾರೆ.

ಹಿರೇಕೆರೂರು ಕ್ಷೇತ್ರದಲ್ಲಿ ಕೊರೊನಾ ಎರಡನೇ ಅಲೆಗೆ ಮೃತಪಟ್ಟವರ ಕುಟುಂಬಸ್ಥರಿಗೆ ಪರಿಹಾರ ಘೋಷಣೆ ಮಾಡಿದ್ದಾರೆ. ನಾಳೆಯಿಂದ ಹಿರೇಕೆರೂರು ಮತ್ತು ರಟ್ಟಿಹಳ್ಳಿ ತಾಲೂಕಿನಲ್ಲಿ ಮೃತರ ಮನೆಗಳಿಗೆ ತೆರಳಿ ಪರಿಹಾರದ ಹಣ ವಿತರಣೆ ಮಾಡಲಿದ್ದಾರೆ.’

ಈಗಾಗಲೇ ಕ್ಷೇತ್ರದಲ್ಲಿ 18 ಜನರು ಕೊರೊನಾದಿಂದ ಮೃತಪಟ್ಟಿದ್ದಾರೆ. ಇವರೆಲ್ಲ ಮನೆಗಳಿಗೆ ಸ್ವತಃ ತಾವೇ ತೆರಳಿ 50 ಸಾವಿರ ರೂಪಾಯಿ ಪರಿಹಾರ ವಿತರಿಸಲಿದ್ದಾರೆ. ಜಿಲ್ಲೆಯಲ್ಲಿ ಸೋಂಕಿತರಾಗಿ ಹೋಮ್ ಐಸೋಲೇಶನ್ ನಲ್ಲಿ ಇರುವವರು ಕೋವಿಡ್ ಕೇರ್ ಸೆಂಟರ್ ಗಳಿಗೆ ದಾಖಲಾಗಿ, ಕುಟುಂಬ ವರ್ಗದವರಿಗೆ ಸೋಂಕು ತಗುಲದಂತೆ ಎಚ್ಚರಿಕೆ ವಹಿಸುವಂತೆ ಜನರಲ್ಲಿ ಕೃಷಿ ಬಿ.ಸಿ.ಪಾಟೀಲ್ ಮನವಿ ಮಾಡಿದ್ದಾರೆ.

The post ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ವೈಯಕ್ತಿಕವಾಗಿ 50 ಸಾವಿರ ಪರಿಹಾರ ಘೋಷಿಸಿದ ಬಿ.ಸಿ.ಪಾಟೀಲ್ appeared first on Public TV.

Source: publictv.in

Source link