ಬೆಂಗಳೂರು: ಕೊರೊನಾದಿಂದ ಮೃತಪಟ್ಟ ಬಿಪಿಎಲ್​ ಕಾರ್ಡ್​ ಹೋಲ್ಡರ್​ ಕುಟುಂಬಗಳಿಗೆ 1 ಲಕ್ಷ ಪರಿಹಾರ ಘೋಷಣೆಯನ್ನ ಸಿಎಂ ಯಡಿಯೂರಪ್ಪ ಮಾಡಿದ್ದಾರೆ. ಅದರ ಬದಲಾಗಿ ಐದು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನ ಆಗ್ರಹಿಸಿದ್ದಾರೆ.

ಟ್ವೀಟ್​ ಮಾಡಿರುವ ಸಿದ್ದರಾಮಯ್ಯ.. ಸಿಎಂ ಯಡಿಯೂರಪ್ಪ ಘೋಷಿಸಿರುವ ಒಂದು ಲಕ್ಷ ರೂಪಾಯಿ ಪರಿಹಾರವನ್ನು ವಿಪತ್ತು ನಿರ್ವಹಣಾ ನಿಯಮಕ್ಕೊಳಪಡಿಸಿ, ಐದು ಲಕ್ಷ ರೂಪಾಯಿಗೆ ಹೆಚ್ಚಿಸಬೇಕೆಂದು ಒತ್ತಾಯಿಸುತ್ತೇನೆ ಅಂತ ಹೇಳಿದ್ದಾರೆ.

ಕೊರೊನಾ ಸೋಂಕನ್ನು ಈಗಾಗಲೇ ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಲಾಗಿದೆ. ಆದ್ದರಿಂದ ವಿಪತ್ತು ಪರಿಹಾರ‌ದ ನಿಯಮಗಳಡಿ ಮೃತ ವ್ಯಕ್ತಿಗಳ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಪರಿಹಾರ ನೀಡಲು ಸಾಧ್ಯವಿದೆ.‌ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟು ಈ ಅವಕಾಶವನ್ನು ಯಡಿಯೂರಪ್ಪ ಬಳಸಿಕೊಳ್ಳಬೇಕು ಎಂದು ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದಾರೆ.

The post ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ BPL​ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಕೊಡಿ -ಸಿದ್ದರಾಮಯ್ಯ ಆಗ್ರಹ appeared first on News First Kannada.

Source: newsfirstlive.com

Source link