ತುಮಕೂರು: ಕೊರೊನಾ ಅಟ್ಟಹಾಸಕ್ಕೆ ತುಮಕೂರು ವಾರ್ತಾ ಇಲಾಖೆಯ ಉಪನಿರ್ದೇಶಕ ಮಂಜುನಾಥ್ ವಿಧಿವಶರಾಗಿದ್ದಾರೆ.

38 ವರ್ಷದ ಮಂಜುನಾಥ್ ಖಾಸಗಿ ದಿನಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. 2015ರಲ್ಲಿ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರಾಗಿ ನೇಮಕಗೊಂಡಿದ್ದ ಇವರು, ಕಳೆದ ಒಂದು ವರ್ಷದ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಕಳೆದ ವಾರ ಕೊರೊನಾ ಸೋಂಕಿಗೀಡಾಗಿದ್ದ ಮಂಜುನಾಥ್ ಅವರನ್ನ ಬೆಂಗಳೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಅವರು  ಸಾವನ್ನಪ್ಪಿದ್ದಾರೆ. ಅವರ ಅಂತ್ಯಕ್ರಿಯೆಯನ್ನ ದೊಡ್ಡಬಳ್ಳಾಪುರದಲ್ಲಿ ಕೋವಿಡ್ ನಿಯಮಾನುಸಾರ ನೆರವೇರಿಸಲಾಗುತ್ತದೆ.

The post ಕೊರೊನಾದಿಂದ ವಾರ್ತಾ ಇಲಾಖೆಯ ಉಪನಿರ್ದೇಶಕ ಮಂಜುನಾಥ್ ನಿಧನ appeared first on News First Kannada.

Source: newsfirstlive.com

Source link