ಬಳ್ಳಾರಿ: ಕೋವಿಡ್​ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಮಹಿಳಾ ವೈದ್ಯರ ಮೇಲೆ ಏಕಾಏಕಿ ಹಲ್ಲೆ ನಡೆಸಿರುವ ಘಟನೆ ವಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.

ನಿನ್ನೆ ಮಧ್ಯರಾತ್ರಿ 3 ಗಂಟೆ ಸುಮಾರಿಗೆ ವೈದ್ಯರ ಮೇಲೆ ಹಲ್ಲೆ ನಡೆದಿದೆ. ಕೊರೊನಾ‌ದಿಂದ ವ್ಯಕ್ತಿ ಸಾವನ್ನಪ್ಪಿದ ಎನ್ನುವ ಕಾರಣಕ್ಕೆ ಹಲ್ಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹಲ್ಲೆ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕೊರೊನಾ ಕಂಟಕ ಶುರುವಾದ ದಿನದಿಂದ ವೈದ್ಯರು ತಮ್ಮ ಪ್ರಾಣವನ್ನೂ ಲೆಕ್ಕಿಸದೇ ಜೀವ ಉಳಿಸಲು ಹೋರಾಡ್ತಿದ್ದಾರೆ. ಹೀಗಿದ್ದೂ ಮಧ್ಯರಾತ್ರಿ ಮಹಿಳಾ ವೈದ್ಯರ ಮೇಲೆ ಹಲ್ಲೆ ನಡೆದಿದೆ. ತಮ್ಮ ಜೀವವನ್ನೇ ಪಣಕ್ಕಿಟ್ಟು ಚಿಕಿತ್ಸೆ ನೀಡುವ ವೈದ್ಯರಿಗೆ ರಕ್ಷಣೆ ಇಲ್ವಾ ಅನ್ನೋ ಪ್ರಶ್ನೆ ಎದ್ದಿದೆ.

The post ಕೊರೊನಾದಿಂದ ವ್ಯಕ್ತಿ ಸಾವು:​ ಕರ್ತವ್ಯ ನಿರತ ಮಹಿಳಾ ವೈದ್ಯೆ ಮೇಲೆ ಸಂಬಂಧಿಕರಿಂದ ಹಲ್ಲೆ appeared first on News First Kannada.

Source: newsfirstlive.com

Source link