ಕೊರೊನಾ ಆತಂಕ; ಇಂದು ತಮಿಳುನಾಡು ಸಂಪೂರ್ಣ ಲಾಕ್‌ಡೌನ್


ಚೆನ್ನೈ: ತಮಿಳುನಾಡಿನಲ್ಲಿ ಮಹಾಮಾರಿ ಕೊರೊನಾ ಆರ್ಭಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ರಾಜ್ಯಾದ್ಯಂತ ಸಂಪೂರ್ಣ ಲಾಕ್​ಡೌನ್ ಮಾಡಿ ಸಿಎಂ ಎಂ.ಕೆ. ಸ್ಟಾಲಿನ್ ಆದೇಶ ಹೊರಡಿಸಿದ್ದಾರೆ.

ಜನವರಿ 16ರಂದು ವಿಧಿಸಿದ್ದ ಲಾಕ್‌ಡೌನ್ ನಿಯಮಗಳೇ ಇಂದೂ ಅನ್ವಯಿಸುತ್ತವೆ ಎಂದು ಸಿಎಂ ತಿಳಿಸಿದ್ದಾರೆ. ಇನ್ನು, ಸೋಂಕಿನ ಪ್ರಕರಣಗಳು ಹರಡುವುದನ್ನು ತಡೆಯಲು ತೆಗೆದುಕೊಳ್ಳುತ್ತಿರುವ ಕ್ರಮಗಳಿಗೆ ಸಾರ್ವಜನಿಕರು ಸಹಕರಿಸುವಂತೆ ಮುಖ್ಯಮಂತ್ರಿ ಸ್ಟಾಲಿನ್ ಮನವಿ ಮಾಡಿಕೊಂಡಿದ್ದಾರೆ.

ಈ ವೇಳೆ ಮೊಬೈಲ್​ ಆ್ಯಪ್​ ಆಧಾರಿತ ಆಟೋ, ಟ್ಯಾಕ್ಸಿಗಳು ಮತ್ತು ಇತರ ವಾಹನಗಳು ಜನರಿಗೆ ಸೇವೆ ಸಲ್ಲಿಸಲು ಅವಕಾಶ ನೀಡಲಾಗಿದೆ.  ಇನ್ನು ಕಳೆದ 24 ಗಂಟೆಯಲ್ಲಿ ತಮಿಳುನಾಡಿನಲ್ಲಿ 28,561 ಪಾಸಿಟಿವ್​ ಕೇಸ್, 39 ಮಂದಿ ಸಾವನ್ನಪ್ಪಿದ್ದಾರೆ. 

News First Live Kannada


Leave a Reply

Your email address will not be published. Required fields are marked *