ಬೆಂಗಳೂರು: ಕೊರೊನಾ ರೋಗ ಲಕ್ಷಣವಿದ್ದರೂ ಪರೀಕ್ಷೆಯಲ್ಲಿ ನೆಗೆಟಿವ್ ಕಂಡುಬರುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಸಿಂಡ್ರೋಮಿಕ್ ವಿಧಾನ ಅನುಸರಿಸಿ ರೋಗಿಗಳನ್ನ ಆಸ್ಪತ್ರೆಗೆ ದಾಖಲಿಸಲು ನಿರ್ಧರಿಸಲಾಗಿದೆ ಅಂತ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಹಲವು ಪ್ರಕರಣಗಳಲ್ಲಿ ಆರ್​​ಟಿಪಿಸಿಆರ್ ಹಾಗೂ ಆ್ಯಂಟಿಜೆನ್ ಪರೀಕ್ಷೆ ಮಾಡಿಸಿದರೂ ನೆಗೆಟಿವ್ ವರದಿ ಬರುತ್ತಿದೆ. ವ್ಯಕ್ತಿಗೆ ಕೋವಿಡ್ ರೋಗ ಲಕ್ಷಣವಿದ್ದರೂ ವರದಿಯಲ್ಲಿ ನೆಗೆಟಿವ್ ಬರುವುದರಿಂದ, ರೋಗ ತೀವ್ರತೆ ಹೆಚ್ಚಾದ ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸಲು ಸಮಸ್ಯೆಯಾಗುತ್ತದೆ.

ಈ ಸಮಸ್ಯೆಯನ್ನು ನಿವಾರಿಸಲು ಹಾಗೂ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುವ ಉದ್ದೇಶದಿಂದ ಸಿಂಡ್ರೋಮಿಕ್ ಅಪ್ರೋಚ್ ಅನುಸರಿಸಲು ತೀರ್ಮಾನಿಸಲಾಗಿದೆ. ಅಂತಹ ಪ್ರಕರಣಗಳಲ್ಲಿ ವೈದ್ಯರ ಆಥರೈಸೇಷನ್ ಆಧರಿಸಿ, ಆಸ್ಪತ್ರೆಗೆ ದಾಖಲಿಸಲು ಮತ್ತು ಚಿಕಿತ್ಸೆಗಾಗಿ ಪೇಷಂಟ್ ನಂಬರ್ ನೀಡಲು ನಿರ್ಧರಿಸಲಾಗಿದೆ. ಇದರಿಂದ ಸೋಂಕಿತರನ್ನ ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸಲು ಮತ್ತು ಚಿಕಿತ್ಸೆ ನೀಡಲು ಸಹಾಯ ಮಾಡುತ್ತದೆ. ವಿಶೇಷವಾಗಿ SAST ರೆಫರೆನ್ಸ್ ಮೂಲಕ ಸರ್ಕಾರಿ ಆಸ್ಪತ್ರೆಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವವರಿಗೆ ನೆರವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಸಿಂಡ್ರೋಮಿಕ್ ಅಪ್ರೋಚ್ ಅನುಸರಣೆ ಮಾಡಬೇಕೆಂದು ಈಗಾಗಲೇ ಆಸ್ಪತ್ರೆಗಳಿಗೆ ಹಾಗೂ ಆರೋಗ್ಯಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಲಾಗಿದೆ.

ನ್ಯೂಸ್​ಫಸ್ಟ್​ ಕಳಕಳಿ : ನಿಮ್ಮ ಎಚ್ಚರಿಕೆಯಲ್ಲಿ ನೀವಿರಿ. ಮಾಸ್ಕ್ ಧರಿಸಿ, ಸೋಶಿಯಲ್ ಡಿಸ್ಟನ್ಸ್ ಕಾಪಾಡಿ. ಕೈ ತೊಳೆಯುತ್ತಿರಿ. ಮತ್ತು ಮೇ 1 ರಿಂದ 18ರ ಮೇಲ್ಪಟ್ಟ ಎಲ್ಲರೂ ವ್ಯಾಕ್ಸಿನ್ ಪಡೆಯಲು ಅರ್ಹರಾಗಿದ್ದು ರೆಜಿಸ್ಟರ್ ಮಾಡಿಕೊಳ್ಳಬಹುದಾಗಿದೆ. ಅದಕ್ಕಾಗಿ https://www.cowin.gov.in/  ಇಲ್ಲಿಗೆ ಭೇಟಿ ಕೊಟ್ಟು ನೊಂದಣಿ ಮಾಡಿಕೊಳ್ಳಿ. ಮತ್ತೊಂದು ಮುಖ್ಯ ಸಂಗತಿ ಗಮನಿಸಿ CoWin ಆ್ಯಪ್ ಸಾರ್ವಜನಿಕರಿಗೆ ಅಲ್ಲ. ಹೀಗಾಗಿ ಕಡ್ಡಾಯವಾಗಿ ವೆಬ್​ಸೈಟ್​ನಲ್ಲಿಯೇ ನೊಂದಾಯಿಸಿಕೊಳ್ಳಬೇಕು.

 

The post ಕೊರೊನಾ ಇದ್ರೂ ಹಲವರ ವರದಿ ನೆಗೆಟಿವ್: ಸಿಂಡ್ರೋಮಿಕ್ ವಿಧಾನ ಅನುಸರಿಸಲು ರಾಜ್ಯ ಸರ್ಕಾರ ಸೂಚನೆ appeared first on News First Kannada.

Source: newsfirstlive.com

Source link