ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಮೇ 18 ರಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಸಂವಾದ ನಡೆಸಲಿದ್ದಾರೆ.

ಪ್ರಧಾನಿಗಳ ವಿಡಿಯೋ ಕಾನ್ಫರೆನ್ಸ್‌ನಲ್ಲಿ ರಾಜ್ಯದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕೂಡ ಭಾಗಿಯಾಗುತ್ತಾರೆ‌. ಉತ್ತರ ಕನ್ನಡ, ಹಾಸನ, ಬಳ್ಳಾರಿ, ಮೈಸೂರು, ತುಮಕೂರು, ಕೋಲಾರ, ಕೊಡಗು, ಬೆಂಗಳೂರು ನಗರ, ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಧಾರವಾಡ, ದಕ್ಷಿಣ ಕನ್ನಡ, ರಾಯಚೂರು, ಕಲಬುರಗಿ, ಮಂಡ್ಯ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಭಾಗಿಯಾಗಲಿದ್ದಾರೆ.

The post ಕೊರೊನಾ ಉಲ್ಬಣ; ಮೇ 18 ರಂದು ಬಿಎಸ್​ವೈ ಜೊತೆ ಮೋದಿ ವಿಡಿಯೋ ಸಂವಾದ appeared first on News First Kannada.

Source: newsfirstlive.com

Source link