ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಉಲ್ಬಣ ಹಿನ್ನೆಲೆಯಲ್ಲಿ ಇಂಗ್ಲೆಂಡ್​ನ ಕೊರ್ನ್​ವಾಲ್​ನಲ್ಲಿ ನಡೆಯುವ G7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುತ್ತಿಲ್ಲ ಅಂತಾ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು, ನರೇಂದ್ರ ಮೋದಿಗೆ ವಿಶೇಷ ಆಹ್ವಾನ ನೀಡಿದ್ದರು. ಈ ಸಂದರ್ಭದಲ್ಲಿ ನಾವು ಅವರಿಗೆ ಕೃತಜ್ಞತೆ ಸಲ್ಲಿಸುತ್ತೇವೆ. ದೇಶದಲ್ಲಿರುವ ಸದ್ಯದ ಪರಿಸ್ಥಿತಿಯನ್ನ ಅವಲೋಕಿಸಿ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಅವರೇ ಖುದ್ದು ಭಾಗವಹಿಸದಿರಲು ನಿರ್ಧರಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಬ್ರಿಟನ್ ಹೈಕಮಿಷನ್ ಕಳೆದ ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಜಿ7 ಸಭೆಯಲ್ಲಿ ಭಾಗವಹಿಸಲು ವಿಶೇಷ ಆಹ್ವಾನ ನೀಡಿತ್ತು. ಇನ್ನು ದೇಶದಲ್ಲಿ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಜಾನ್ಸನ್ ಭಾರತ ಪ್ರವಾಸವನ್ನ ರದ್ದು ಮಾಡಿದ್ದರು.

The post ಕೊರೊನಾ ಉಲ್ಬಣ; G7 ಶೃಂಗಸಭೆಯಲ್ಲಿ ಭಾಗವಹಿಸದಿರಲು ನಿರ್ಧರಿಸಿದ ಮೋದಿ appeared first on News First Kannada.

Source: newsfirstlive.com

Source link