ಕೊಪ್ಪಳ: ಕೊರೊನಾ ಸೋಂಕಿತರಲ್ಲಿ ಆತ್ಮವಿಶ್ವಾಸ ತುಂಬುವ ನಿಟ್ಟಿನಲ್ಲಿ ಸಂಗೀತ ರಸಮಂಜರಿ ಕಾರ್ಯಕ್ರಮವನ್ನು ಕೊಪ್ಪಳ ಜಿಲ್ಲೆಯ ಕೊರೊನಾ ಕೇರ್ ಸೆಂಟರ್‌ನಲ್ಲಿ ಮಾಡಲಾಗುತ್ತಿದೆ.

ಕೊರೊನಾ ಕೇರ್ ಸೆಂಟರ್‌ನಲ್ಲಿ ಸೋಂಕಿತರಿಗೆ ರಸಮಂಜರಿ ಕಾರ್ಯಕ್ರಮದ ಮೂಲಕ ರಂಜಿಸಲಾಗುತ್ತಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕಡೇಬಾಗಿಲು ಗ್ರಾಮದ ಬಳಿಯಲ್ಲಿರುವ ಕೊರೊನಾ ಕೇರ್ ಸೆಂಟರ್‌ನಲ್ಲಿ ನಿನ್ನೆ ರಾತ್ರಿ ಚಿಕ್ಕಹನುಮನಳ್ಳಿಯ ಕಲಾವಿದನಿಂದ ಸಂಗೀತ ರಸ ಮಂಜರಿ ಕಾರ್ಯಕ್ರಮ ಜರುಗಿತು. ಇದನ್ನೂ ಓದಿ: ಕೋವಿಡ್ ಸೆಂಟರ್‌ನಲ್ಲಿ ಸೋಂಕಿತರಿಗೆ ಹೋಳಿಗೆ ಊಟ ಬಡಿಸಿದ ರೇಣುಕಾಚಾರ್ಯ

ಕಲಾವಿದ ದುರ್ಗಪ್ಪ ಅವರು ಸಂಗೀತ ಕಾರ್ಯಕ್ರಮದ ಮೂಲಕ ಕೊರೊನಾ ಕೇರ್ ಸೆಂಟರ್‌ನಲ್ಲಿ  ಸೋಂಕಿತರಿಗೆ ಮನೋರಂಜನೆಯನ್ನು ನೀಡಿದರು. ಒಟ್ಟು 30 ಜನ ಸೋಂಕಿತರಿರುವ ಈ ಕೋವಿಡ್ ಕೇರ್ ಸೆಂಟರ್‍ನಲ್ಲಿ ನಿತ್ಯ ವಿವಿಧ ಕಲಾವಿದರಿಂದ ಸಂಗೀತ ಕಾರ್ಯಕ್ರಮ ನಡೆಯುತ್ತಿದೆ. ಸೋಂಕಿತರಲ್ಲಿ ಧೈರ್ಯ, ಆತ್ಮಸ್ಥೈರ್ಯ ಹೆಚ್ಚಿಸುವ ಉದ್ದೇಶದಿಂದ ನಿತ್ಯ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಸಂಗೀತ ರಸಮಂಜರಿಯ ಹಾಡಿಗೆ ಸೋಂಕಿತರು ಕುಣಿದು ಕುಪ್ಪಳಿಸಿದರು. ಇದನ್ನೂ ಓದಿ: ನಮ್ಮನ್ನ ಪ್ಲೀಸ್ ಮನೆಗೆ ಕಳಿಸಿ- ಕೋವಿಡ್ ಸೋಂಕಿತರ ಅಳಲು

ಕೆಲವುದಿನಗಳ ಹಿಂದೆ ಕೊರೊನೊ ಸೋಂಕಿತರಿಗೆ ಆತ್ಮಸ್ಥೈರ್ಯ ಹೆಚ್ಚಿಸುವ ಉದ್ದೇಶದಿಂದ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಕುಣಿದು ಮನರಂಜನೆ ನೀಡಿದ್ದರು.

The post ಕೊರೊನಾ ಕೇರ್ ಸೆಂಟರ್‌ನಲ್ಲಿ ಸಂಗೀತ ರಸಮಂಜರಿ appeared first on Public TV.

Source: publictv.in

Source link