ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮಲೇರಿಯಾ, ಡೆಂಗ್ಯೂ ಬಾದಿಸದಂತೆ ಮತ್ತು ಝಿಕಾ ವೈರಸ್ ಕುರಿತು ಎಚ್ಚರಿಕೆ ಹಿನ್ನೆಲೆಯಲ್ಲಿ ಮೇಯರ್ ಪ್ರೇಮಾನಂದ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪಾಲಿಕೆಯ ಸಭಾಂಗಣದಲ್ಲಿ ಮುಂಜಾಗ್ರತ ಸಭೆ ಜರಗಿತು.

ಸಭೆಯಲ್ಲಿ ಮಾತನಾಡಿದ ತಾಲೂಕು ವೈದ್ಯಾಧಿಕಾರಿಯವರು ಮಲೇರಿಯಾ ಮತ್ತು ಡೆಂಗ್ಯೂ ತಡೆಗಟ್ಟಲು ಮೊದಲನೇಯದಾಗಿ ಸೊಳ್ಳೆ ಉತ್ಪತ್ತಿಯಾಗುವುದನ್ನು ತಡೆಯಬೇಕು. ಪಾಲಿಕೆಯ ಎಂಪಿಡಬ್ಲ್ಯೂ ಕಾರ್ಯಕರ್ತರು ಮನೆ ಮನೆ ಭೇಟಿ ಮಾಡಿ ಮನೆಯ ಸುತ್ತ ಮುತ್ತಲುನಲ್ಲಿರುವ ತ್ಯಾಜ್ಯ ಮತ್ತು ಯಾವುದೇ ಬಿಸಾಡುವಂತಹ ವಸ್ತುಗಳಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು ಎನ್ನುವ ಮಾಹಿತಿಯನ್ನು ಒದಗಿಸಿದರು. ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ ಸಾರ್ವಜನಿಕರು ತಮ್ಮ ತಮ್ಮ ಮನೆಯ ಸುತ್ತ ಮುತ್ತ ಸ್ವಚ್ಚವಾಗಿ ಇರಿಸಲು ಆಸಕ್ತಿ ವಹಿಸಿದರೆ ಸೊಳ್ಳೆ ಉತ್ಪತ್ತಿಯನ್ನು ತಡೆಯಬಹುದಾಗಿದೆ ಎನ್ನುವ ಮಾಹಿತಿ ತಿಳಿಸಿದರು.

ಸಭೆಯಲ್ಲಿ ಪಾಲಿಕೆಯ ಆಯುಕ್ತರಾದ ಅಕ್ಷಯ್ ಶ್ರೀಧರ್, ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಸಂದೀಪ್ ಗರೋಡಿ, ಉಪ ಆಯುಕ್ತರು(ಆಡಳಿತ) ಸಂತೋಷ್ ಕುಮಾರ್, ತಾಲೂಕು ವೈದ್ಯಾಧಿಕಾರಿ ಡಾ.ನವೀನ್ ಕುಲಾಲ್, ಪಾಲಿಕೆಯ ಆರೋಗ್ಯ ಅಧಿಕಾರಿ ಮಂಜಯ್ಯ ಶೆಟ್ಟಿ, ಪಾಲಿಕೆಯ ಆರೋಗ್ಯ ವಿಭಾಗದ ಎಂ.ಪಿ.ಡಬ್ಲ್ಯೂ ಮೇಲ್ವಿಚಾರಕರು, ಕಾರ್ಯಕರ್ತರು ಉಪಸ್ಥಿತರಿದ್ದರು.

The post ಕೊರೊನಾ ಜೊತೆ ಮಲೇರಿಯಾ, ಡೆಂಗ್ಯೂ, ಝಿಕಾ ವೈರಸ್ ಆತಂಕ- ಮಂಗಳೂರು ಪಾಲಿಕೆಯಲ್ಲಿ ತುರ್ತು ಸಭೆ appeared first on Public TV.

Source: publictv.in

Source link