ಕೊರೊನಾ ನಿಯಂತ್ರಣಕ್ಕೆ ಲಾಕ್ಡೌನ್, ನೈಟ್ ಕರ್ಫ್ಯೂ ಪರಿಹಾರ ಅಲ್ಲ ಅಂತಾ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪರೋಕ್ಷವವಾಗಿ ತಮ್ಮದೇ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ಗೋವಾದ ಪಣಜಿಯಲ್ಲಿ ಮಾತನಾಡಿ, ನಾನು ಕರ್ನಾಟಕ ಸರ್ಕಾರದ ನಿರ್ಧಾರವನ್ನು ವಿರೋಧಿಸುತ್ತಿಲ್ಲ. ಪ್ರಸ್ತುತ ಸಂದರ್ಭದಲ್ಲಿ ಲಾಕ್ಡೌನ್ ಮತ್ತು ನೈಟ್ ಕರ್ಫ್ಯೂ ವಿಧಿಸಿದರೆ ಜನಸಾಮಾನ್ಯರಿಗೆ ಹೊರೆಯಾಗಲಿದೆ.
ಸರ್ಕಾರ ಇದರ ಬಗ್ಗೆ ಗಂಭೀರ ಚಿಂತನೆ ನಡೆಸಬೇಕು. ಪರಿಸ್ಥಿತಿಯನ್ನು ಪರಾಮರ್ಶಿಸಿ ತಜ್ಞರ ಸಲಹೆ ಪಡೆದು ಕ್ರಮ ತೆಗೆದುಕೊಳ್ಳಲು ನನ್ನ ಅಭ್ಯಂತರವಿಲ್ಲ. ಆದರೆ, ವೈಯಕ್ತಿಕವಾಗಿ ಲಾಕ್ಡೌನ್ ಹೇರುವ ಅಗತ್ಯವಿಲ್ಲ ಎಂದಿದ್ದಾರೆ.