ದಾವಣಗೆರೆ: ಒಂದೆಡೆ ಕೊರೊನಾ ಸೋಂಕು ನಿಯಂತ್ರಣಕ್ಕೆ ತರಲು ಲಾಕ್​ಡೌನ್ ಜಾರಿಗೊಳಿಸಿ ದೇವಸ್ಥಾನಗಳೂ ಸೇರಿದಂತೆ ಧಾರ್ಮಿಕ ಕ್ಷೇತ್ರಗಳ ಬಾಗಿಲು ಮುಚ್ಚಿಸಲಾಗಿದೆ. ಇತ್ತ ಜಗಳೂರು ಶಾಸಕ ಮುಚ್ಚಿದ್ದ ದೇವಸ್ಥಾನದ ಬಾಗಿಲು ತೆರೆಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಶಾಸಕರ ನಡೆಗೆ ಜಗಳೂರು ಕ್ಷೇತ್ರದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಗಳೂರು ಬಿಜೆಪಿ ಶಾಸಕ ಎಸ್ ವಿ ರಾಮಚಂದ್ರಪ್ಪ ಅವರು ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದು ದೇವಸ್ಥಾನಗಳು ಬಂದ್ ಇದ್ದರೂ ಕೂಡ ದೇವಸ್ಥಾನದ ಬಾಗಿಲು ತೆರೆಸಿ ವಿಶೇಷ ಪೂಜೆ ನೆರವೇರಿಸಿದ್ದಾರೆ. ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಮಾಡ್ರಳ್ಳಿ ಗ್ರಾಮದ ಚೌಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಪತ್ನಿ ಇಂದಿರಾ ರಾಮಚಂದ್ರಪ್ಪ, ಪುತ್ರ ಅಜಯೇಂದ್ರ ಸಿಂಹ ಸೇರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದು ಜನರು ಈ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನಸಾಮಾನ್ಯರಿಗೊಂದು ನ್ಯಾಯ, ಜನಪ್ರತಿನಿಧಿಗಳಿಗೊಂದು ನ್ಯಾಯವಾ..? ಲಾಕ್​ಡೌನ್​ನಲ್ಲಿ ದೇವಸ್ಥಾನಗಳು ಬಂದ್ ಇದ್ದರೂ ಪೂಜೆಗೆ ಅವಕಾಶ ನೀಡಿದ್ದು ಯಾರು..? ಎಂದು ಜನರು ಪ್ರಶ್ನಿಸಿದ್ದಾರೆ. ಕೊರೊನಾ ಎರಡನೇ ಅಲೆ ಕಡಿಮೆ ಆಗಲೆಂದು ಶಾಸಕರು ವಿಶೇಷ ಪೂಜೆ ಸಲ್ಲಿಸಿದ್ದಾರೆ ಎನ್ನಲಾಗಿದೆ.

The post ಕೊರೊನಾ ನಿಯಮ ಉಲ್ಲಂಘಿಸಿ, ದೇವಸ್ಥಾನದ ಬಾಗಿಲು ತೆರೆಸಿ ಪೂಜೆ ಸಲ್ಲಿಸಿದ ಬಿಜೆಪಿ ಶಾಸಕ appeared first on News First Kannada.

Source: newsfirstlive.com

Source link