ಕೊರೊನಾ ಬಾಧೆಯ ಬಳಿಕ ಈ ಬಾರಿ ಅದ್ದೂರಿ ಮೈಸೂರು ದಸರಾ ಮಹೋತ್ಸವ: ರಾಷ್ಟ್ರಪತಿ ಮುರ್ಮು ಉದ್ಘಾಟನಾ ಕಾರ್ಯಕ್ರಮ ಪಟ್ಟಿ ಹೀಗಿದೆ | President Draupadi Murmu to inaugurated mysore dasara 2020 itinerary released


Chamundeshwari Temple: ಬಳಿಕ ದ್ರೌಪದಿ ಮುರ್ಮು ಅವರು ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡಿ ಸೋಮವಾರ ಬೆಳಗ್ಗೆ 10 ಗಂಟೆಗೆ ದಸರಾ ಉದ್ಘಾಟಿಸಲಿದ್ದಾರೆ. ಬೆಳಗ್ಗೆ 10:45ಕ್ಕೆ ಚಾಮುಂಡಿ ಬೆಟ್ಟದಿಂದ ಮುರ್ಮು ಹೊರಡುವರು.

ಕೊರೊನಾ ಬಾಧೆಯ ಬಳಿಕ ಈ ಬಾರಿ ಅದ್ದೂರಿ ಮೈಸೂರು ದಸರಾ ಮಹೋತ್ಸವ: ರಾಷ್ಟ್ರಪತಿ ಮುರ್ಮು ಉದ್ಘಾಟನಾ ಕಾರ್ಯಕ್ರಮ ಪಟ್ಟಿ ಹೀಗಿದೆ

ಕೊರೊನಾ ಬಾಧೆಯ ಬಳಿಕ ಈ ಬಾರಿ ಅದ್ದೂರಿ ಮೈಸೂರು ದಸರಾ ಮಹೋತ್ಸವ


ಮೈಸೂರು: ಎರಡು ವರ್ಷಗಳ ಕೊರೊನಾ ಬಾಧೆಯ (Coronavirus) ಬಳಿಕ ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವನ್ನು ಅದ್ದೂರಿಯಾಗಿ ನೆರವೇರಿಸಲು ಜಿಲ್ಲಾಡಳಿತ ಸಕಲ ಸಜ್ಜಾಗಿದೆ. ದೇಶದ ಮೊದಲ ಪ್ರಜೆಯೇ ದಸರಾ ಉದ್ಘಾಟನೆಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022 (Mysore Dasara 2020) ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಅವರ ಕಾರ್ಯಕ್ರಮ ಪಟ್ಟಿ ( Itinerary) ಬಿಡುಗಡೆ ಮಾಡಲಾಗಿದೆ.

ಸೆಪ್ಟೆಂಬರ್ 26ರ ಸೋಮವಾರ ಬೆಳಗ್ಗೆ 6.15ಕ್ಕೆ ರಾಷ್ಟ್ರಪತಿ ಮುರ್ಮು ಅವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಸೆಪ್ಟೆಂಬರ್ 26ರ ಬೆಳಗ್ಗೆ 9 ಗಂಟೆಗೆ ಮಂಡಕಳ್ಳಿ ಏರ್​ಪೋರ್ಟ್​​ಗೆ ಆಗಮಿಸಲಿದ್ದಾರೆ. ನಂತರ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ದಸರಾ ಉದ್ಘಾಟನೆ ಬಳಿಕ ಹುಬ್ಬಳ್ಳಿಗೆ ತೆರಳಲಿರುವ ರಾಷ್ಟ್ರಪತಿ ಮುರ್ಮು

ಬಳಿಕ ದ್ರೌಪದಿ ಮುರ್ಮು ಅವರು ಚಾಮುಂಡೇಶ್ವರಿ ವಿಗ್ರಹಕ್ಕೆ  (Chamundeshwari Temple) ಪುಷ್ಪಾರ್ಚನೆ ಮಾಡಿ ಸೋಮವಾರ ಬೆಳಗ್ಗೆ 10 ಗಂಟೆಗೆ ದಸರಾ ಉದ್ಘಾಟಿಸಲಿದ್ದಾರೆ. ಬೆಳಗ್ಗೆ 10:45ಕ್ಕೆ ಚಾಮುಂಡಿ ಬೆಟ್ಟದಿಂದ ಮುರ್ಮು ಹೊರಡುವರು. ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತ್ರ ಮುರ್ಮು ಭಾಗಿಯಾಗಿ, ಬೆಳಗ್ಗೆ 11:15ಕ್ಕೆ ಮೈಸೂರಿನಿಂದ ಹುಬ್ಬಳ್ಳಿಗೆ ಪ್ರಯಾಣ ಮಾಡಲಿದ್ದಾರೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published.