ಪ್ರಾತಿನಿಧಿಕ ಚಿತ್ರ
ದೇವನಹಳ್ಳಿ: ಕೊರೊನಾ ರೂಪಾಂತರಿ ಒಮಿಕ್ರಾನ್ ಆತಂಕ ಹಿನ್ನೆಲೆ ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿಗಳನ್ನ ಹೊರಡಿಸಿದೆ. ಇಂದಿನಿಂದ ಏರ್ಪೋರ್ಟ್ಗಳಲ್ಲಿ ಹೊಸ ಗೈಡ್ಲೈನ್ಸ್ ಜಾರಿಯಾಗಲಿದೆ. ಹೈರಿಸ್ಕ್ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾವಹಿಸಲಾಗುತ್ತದೆ. ಎರಡು ದಿನಗಳ ಹಿಂದೆ ಕೇಂದ್ರ ಸರ್ಕಾರ ವಿದೇಶಿ ಪ್ರಯಾಣಿಕರಿಗೆ ಹೊಸಮಾರ್ಗಸೂಚಿ ಹೊರಡಿಸಿದ್ದು, ಹೈರಿಸ್ಕ್ ದೇಶಗಳಿಂದ ಬಂದವರಿಗೆ ಏರ್ಪೋರ್ಟ್ಗಳಲ್ಲಿ ಕಡ್ಡಾಯವಾಗಿ ಟೆಸ್ಟಿಂಗ್, ಮಾಡಲಾಗುತ್ತದೆ.
ಟೆಸ್ಟಿಂಗ್ ನಂತರ ಪಾಸಿಟಿವ್ ಬಂದರೆ ಆಸ್ಪತ್ರೆಯಲ್ಲಿ ಐಸೋಲೇಷನ್ ಮಾಡಲಾಗುತ್ತದೆ. ನೆಗೆಟಿವ್ ಬಂದರೆ 7 ದಿನಗಳ ಕಾಲ ಹೋಂ ಕ್ವಾರಂಟೈನ್ ಕಡ್ಡಾಯವಾಗಿದೆ. ಬಂದ ಎಲ್ಲಾ ಪ್ರಯಾಣಿಕರ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಹದ್ದಿನ ಕಣ್ಣಿಡಲು ಸರ್ಕಾರ ಸೂಚಿಸಿದೆ. ಏರ್ಪೋರ್ಟ್ಗಳಲ್ಲಿ ವಿಳಾಸ, ಪೋನ್ ನಂಬರ್ ಪಡೆದುಕೊಂಡು ಕಳಿಸಲಾಗುತ್ತದೆ. ಇನ್ನು ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಇದೇ ಮಾರ್ಗಚೂಚಿಗಳು ಅನ್ವಯವಾಗುತ್ತದೆ.
ದೇಶದಿಂದ ಬರುವವರು ಕಳೆದ 14 ದಿನಗಳ ಪ್ರಯಾಣದ ಇತಿಹಾಸವನ್ನು ನೀಡಬೇಕು. ನವೀಕರಿಸಿದ ಮಾರ್ಗಸೂಚಿಗಳಲ್ಲಿ ಹೈರಿಸ್ಕ್ ದೇಶಗಳಿಂದ ಭಾರತಕ್ಕೆ ಬರುವ ಎಲ್ಲಾ ಪ್ರಯಾಣಿಕರು (ಕೊವಿಡ್ ಲಸಿಕೆ ಪಡೆದಿದ್ದರೂ) ಆಗಮನದ ನಂತರ ಕಡ್ಡಾಯವಾಗಿ ಕೊವಿಡ್ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ವಿಮಾನ ನಿಲ್ದಾಣದಲ್ಲಿ ಹೊರಡುವ 72 ಗಂಟೆಗಳ ಮೊದಲು ಕೊವಿಡ್-19 ಪರೀಕ್ಷೆ ಮಾಡಿಸಬೇಕು.
ಈ ಪರೀಕ್ಷೆಗಳಲ್ಲಿ ಧನಾತ್ಮಕವಾಗಿ ಕಂಡುಬಂದ ಪ್ರಯಾಣಿಕರಿಗೆ ಸಂಪೂರ್ಣ ಜೀನೋಮ್ ಸೀಕ್ವೆನ್ಸಿಂಗ್ಗಾಗಿ ಅವರ ಮಾದರಿಗಳನ್ನು ತೆಗೆದುಕೊಳ್ಳುವುದರ ಜೊತೆಗೆ ಕ್ಲಿನಿಕಲ್ ಮ್ಯಾನೇಜ್ಮೆಂಟ್ ಪ್ರೋಟೋಕಾಲ್ ಪ್ರಕಾರ ಅವರನ್ನು ಪ್ರತ್ಯೇಕಿಸಲಾಗುತ್ತದೆ ಮತ್ತು ಚಿಕಿತ್ಸೆ ನೀಡಲಾಗುತ್ತದೆ. ನೆಗೆಟಿವ್ ಕಂಡು ಬಂದ ಪ್ರಯಾಣಿಕರು ವಿಮಾನ ನಿಲ್ದಾಣದಿಂದ ನಿರ್ಗಮಿಸಬಹುದು ಆದರೆ 7 ದಿನಗಳವರೆಗೆ ಹೋಮ್ ಐಸೋಲೇಶನ್ಗೆ ಒಳಗಾಗಬೇಕಾಗುತ್ತದೆ. ಭಾರತಕ್ಕೆ ಆಗಮಿಸಿದ 8 ನೇ ದಿನದಂದು ಪುನರಾವರ್ತಿತ ಪರೀಕ್ಷೆಯನ್ನು ನಡೆಸಬೇಕು, ನಂತರ 7 ದಿನಗಳ ಸ್ವಯಂ-ಮೇಲ್ವಿಚಾರಣೆಯಲ್ಲಿರಬೇಕು.
ಹೆಚ್ಚು ಆರೋಗ್ಯ ಸಿಬ್ಬಂದಿ ನಿಯೋಜನೆ
ವಿದೇಶಗಳಿಂದ ಬರುವವರ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಏರ್ಪೋರ್ಟ್ನಲ್ಲಿ ಹೆಚ್ಚು ಆರೋಗ್ಯ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. KIABಯಲ್ಲಿ 30ಕ್ಕೂ ಹೆಚ್ಚು ಆರೋಗ್ಯ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೋಲಾರ ಜಿಲ್ಲೆಯ ಆರೋಗ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ ಅಂತ ಟಿವಿ9ಗೆ ಬೆಂಗಳೂರು ನಗರ ಡಿಸಿ ಶ್ರೀನಿವಾಸ್ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ