ಬೀದರ್: ಚಿಟಗುಪ್ಪಾ ತಾಲ್ಲೂಕಿಗೆ ಭೇಟಿ ನೀಡಿ ಅಲ್ಲಿನ ಕೊರೊನಾ ಕೊರೊನಾ ವಾರಿಯರ್ಸ್‌ಗೆ ಸಚಿವ ಸನ್ಮಾನ ಪ್ರಭು ಚವ್ಹಾಣ್ ಸನ್ಮಾನ ಮಡಿದ್ದಾರೆ.

ವೈದ್ಯಾಧಿಕಾರಿಗಳು, ಶುಶ್ರೂಷಕರು, ಡಾಟಾ ಎಂಟ್ರಿ ಆಪರೇಟರ್, ಲ್ಯಾಬ್ ಟೆಕ್ನಿಷಿಯನ್, ಪೊಲೀಸ್, ಕಂದಾಯ ಇಲಾಖೆಯ ಕೊರೊನಾ ವಾರಿಯರ್ಸ್ ಸೇರಿದಂತೆ ಒಟ್ಟು 64 ಜನರಿಗೆ ಸಚಿವರು ಶಾಲು ಹೋದಿಸಿ,ಗೌರವಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕಳೆದ ವರ್ಷ 2020ರಲ್ಲಿ ಒಕ್ಕರಿಸಿದ ಕೊರೊನಾ ವೈರಸ್ ಜನರಲ್ಲಿ ಸಾಕಷ್ಟು ಆತಂಕವನ್ನು ಸೃಷ್ಟಿಸಿದೆ. ಅದೇ ರೀತಿ ಈ ವರ್ಷವು ಕೂಡ 2ನೇ ಅಲೆಯ ರೂಪದಲ್ಲಿ ಜನರನ್ನು ಕಾಡುತ್ತಿದೆ. ಈ ಕೊರೊನಾ ವೈರಸ್ ಮಹಾಮಾರಿಯಿಂದಾಗಿ ನಾವು ಕೆಲವರನ್ನು ಕಳೆದುಕೊಂಡಿದ್ದೇವೆ. ಈ ವೈರಸ್‍ನ್ನು ನಿಯಂತ್ರಿಸಲು ಜಿಲ್ಲಾಡಳಿತ, ತಾಲೂಕಾ ಆಡಳಿತ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ಬಹಳಷ್ಟು ಇಲಾಖೆಗಳು ಮಂಚೂಣಿಯಲ್ಲಿ ನಿಂತು ಕೆಲಸ ಮಾಡಿವೆ ಎಂದಿದ್ದಾರೆ.

ತಮ್ಮ ಜೀವಕ್ಕೆ ಹೆದರದೆ ಕೊರೊನಾ ಸೋಂಕಿತರ ಸೇವೆ ಮಾಡಿದ ಹಲವಾರು ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವೈಖರಿಗೆ ಗೌರವಿಸಿ ನಾವು ಅವರನ್ನು ಕೊರೊನಾ ವಾರಿಯರ್ಸ್ ಎಂದು ಸನ್ಮಾನ ಮಾಡುತ್ತಿದ್ದೇವೆ ಎಂದು ಪ್ರಭು ಚವ್ಹಾಣ್ ತಿಳಿಸಿದರು.

ಹುಮ್ನಬಾದ್ ಶಾಸಕರಾದ ರಾಜಶೇಖರ ಪಾಟೀಲ್, ವಿಧಾನ ಪರಿಷತ್ ಸದಸ್ಯ ಚಂದ್ರಶೇಖರ ಪಾಟೀಲ, ಬಿಜೆಪಿ ಮುಖಂಡರಾದ ಸುಭಾಷ್ ಕಲ್ಲೂರ ಹಾಗೂ ಪುರಸಭೆಯ ಅಧಿಕಾರಿಗಳು,ತಹಸೀಲ್ದಾರರು ಸೇರಿದಂತೆ ಇನ್ನೀತರರು ಉಪಸ್ಥಿತಿ ಇದ್ದರು.

The post ಕೊರೊನಾ ವಾರಿಯರ್ಸ್‌ಗೆ ಸಚಿವ ಪ್ರಭು ಚವ್ಹಾಣ್ ಸನ್ಮಾನ appeared first on Public TV.

Source: publictv.in

Source link