ನವದೆಹಲಿ: ಕೊರೊನಾ ವೈರಸ್ ಸೋಂಕಿನಿಂದ ಬಳಲುತ್ತಿರೋ ತಿರುವನಂತಪುರಂ ಕ್ಷೇತ್ರದ ಕಾಂಗ್ರೆಸ್ ಸಂಸದ ಶಶಿ ತರೂರ್ ರಾಷ್ಟ್ರ ರಾಜಧಾನಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶಶಿ ತರೂರ್ ಅವರಿಗೆ ಏಪ್ರಿಲ್ 21ರಂದು ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. ಅಂದಿನಿಂದ ಅವರು ಮನೆಯಲ್ಲಿಯೇ ಕ್ವಾರಂಟೀನ್ ಆಗಿದ್ದರು. ಸದ್ಯ ಚಿಕಿತ್ಸೆಗಾಗಿ ಶಶಿ ತರೂರ್ ದೆಹಲಿಯ ಸರಿತಾ ವಿಹಾರ್‌ನಲ್ಲಿರುವ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.

The post ಕೊರೊನಾ ಸೋಂಕಿಗೀಡಾಗಿದ್ದ ಸಂಸದ ಶಶಿ ತರೂರ್ ಆಸ್ಪತ್ರೆಗೆ ದಾಖಲು appeared first on News First Kannada.

Source: News First Kannada
Read More