ನೆಲಮಂಗಲ: ಕೊರೊನಾ ಸೋಂಕಿತರನ್ನು ಕರೆತರುತ್ತಿದ್ದ ಆ್ಯಂಬುಲೆನ್ಸ್​ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆ್ಯಂಬುಲೆನ್ಸ್​​ನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 4ರ ದಾಬಸ್ ಪೇಟೆ ಬಳಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್​ ಪೇಟೆ ಬಳಿ ಅಪಘಾತ ಸಂಭವಿಸಿದ್ದು, ಗಾಯಳುಗಳಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ಸಂಭವಿಸಿದ ಬಳಿಕ ಆ್ಯಂಬುಲೆನ್ಸ್​​​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಕೂಡಲೇ ಸ್ಥಳೀಯರು ಬೆಂಕಿಯನ್ನು ಅತೋಟಿಗೆ ತಂದಿದ್ದಾರೆ. ಬಳಿಕ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಪಘಾತ ನಡೆದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂಬ ಮಾಹಿತಿ ಲಭಿಸಿದೆ.

The post ಕೊರೊನಾ ಸೋಂಕಿತರನ್ನು ತರ್ತಿದ್ದ ಆ್ಯಂಬುಲೆನ್ಸ್​-ಲಾರಿ ನಡುವೆ ನೆಲಮಂಗಲದಲ್ಲಿ ಭೀಕರ ಅಪಘಾತ appeared first on News First Kannada.

Source: newsfirstlive.com

Source link