ಯಾದಗಿರಿ: ಕೊರೊನಾ ಸೋಂಕಿನಿಂದಾಗಿ ಪೊಲೀಸ್ ಕಾನ್ಸಟೇಬಲ್ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ನಡೆದಿದೆ. 28 ವರ್ಷದ ಶರಣಪ್ಪ ಸಾವನ್ನಪ್ಪಿದವರು.

ಶರಣಪ್ಪ ಕಳೆದ ಮೂರು ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಒಂದು ವರ್ಷದಿಂದ ಶಹಾಪುರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಅನಾರೋಗ್ಯದ ಹಿನ್ನೆಲೆ ವಿಜಯಪುರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರಿಗೆ ಕಳೆದ ಹದಿನೈದು ದಿನಗಳ ಹಿಂದೆ ಕೊವಿಡ್ ಟೆಸ್ಟ್​​ನಲ್ಲಿ ಪಾಸಿಟಿವ್ ಬಂದಿತ್ತು. ಇಂದು ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಶರಣಪ್ಪ ಸಾವನ್ನಪ್ಪಿದ್ದಾರೆ. ಶರಣಪ್ಪ ಮೂಲತಃ ಕಲಬುರಗಿ ಜಿಲ್ಲೆಯ ಅರಳಗುಂಡಗಿ ಗ್ರಾಮದವರು.

The post ಕೊರೊನಾ ಸೋಂಕಿನಿಂದಾಗಿ ಪೊಲೀಸ್ ಕಾನ್​ಸ್ಟೇಬಲ್ ಸಾವು appeared first on News First Kannada.

Source: News First Kannada
Read More