ಬೆಂಗಳೂರು: ಕೊರೊನಾ ಎರಡನೇ ಅಲೆಯ ತೀವ್ರತೆ ಬ್ರೇಕ್​​ ಹಾಕಲು ಸರ್ಕಾರ ಈಗಾಗಲೇ ವೀಕ್​​ಎಂಡ್​ ಕರ್ಫ್ಯೂ, ನೈಟ್​​ ಕರ್ಫ್ಯೂ ಜಾರಿ ಮಾಡಿ ಹಲವು ನಿಯಮಗಳನ್ನು ವಿಧಿಸಿದೆ. ಇದರ ನಡುವೆಯೂ ನಿಯಮಗಳನ್ನು ಮತ್ತಷ್ಟು ಬಿಗಿ ಮಾಡಲು ಮುಂದಾಗಿರುವ ಸರ್ಕಾರ, ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಐದು ಮಂದಿಗೆ ಮಾತ್ರ ಅವಕಾಶ ನೀಡಿ ಹೊಸ ಆದೇಶವನ್ನು ಹೊರಡಿಸಿದೆ.

ಕರ್ಫ್ಯೂ ಜಾರಿ ಮಾಡುವ ಸಂದರ್ಭದಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಅಂತ್ಯ ಸಂಸ್ಕಾರದ ಸಂದರ್ಭದಲ್ಲಿ 20 ಜನರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿತ್ತು. ಸದ್ಯ ಇದನ್ನು ಮತ್ತಷ್ಟು ಕಡಿಮೆ ಮಾಡಿ ಕೊರೊನಾ ಮಾರ್ಗಸೂಚಿ ನಿಯಮಗಳನ್ನು ಪಾಲಿಸಿ ಐದು ಮಂದಿ ಮಾತ್ರ ಭಾಗಿಯಾಗಬೇಕು ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಆದೇಶ ಹೊರಡಿಸಿದ್ದಾರೆ.

The post ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಅಂತ್ಯಸಂಸ್ಕಾರಕ್ಕೆ 5 ಜನರಿಗಷ್ಟೇ ಅವಕಾಶ appeared first on News First Kannada.

Source: News First Kannada
Read More