ಹುಬ್ಬಳ್ಳಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ಅವರು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಳೆದೆರಡು ದಿನಗಳಿಂದ ಹೊರಟ್ಟಿ ಅವರಿಗೆ ಕೆಮ್ಮು ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಈ ಹಿನ್ನೆಲೆ ಮೊನ್ನೆ ಕೊರೊನಾ ಟೆಸ್ಟ್ ಮಾಡಿಸಿದ್ದರು. ನಿನ್ನೆ ಸಂಜೆ ವರದಿ ಬಂದಿದ್ದು, ಕೊರೊನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಹೀಗಾಗಿ ವೈದ್ಯರ ಸಲಹೆ ಮೇರೆಗೆ ಅವರು ಕಿಮ್ಸ್​ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

The post ಕೊರೊನಾ ಹಿನ್ನೆಲೆ, ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಾದ ಸಭಾಪತಿ ಹೊರಟ್ಟಿ appeared first on News First Kannada.

Source: newsfirstlive.com

Source link