ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್‌ನ ಅಟ್ಟಹಾಸ ಹೆಚ್ಚಾಗ್ತಿರುವ ಹಿನ್ನೆಲೆ, ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಇಂದು ಸಂಜೆ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ.

ವಿಧಾನಸೌಧದಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ, ಎಲ್ಲಾ ಸಚಿವರು ಉಪಸ್ಥಿತರಿರುವಂತೆ ಸಿಎಂ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಕೊರೊನಾ ವ್ಯಾಪಕತೆಯ ಬಗ್ಗೆ, ಚಾಮರಾಜನಗರ ಜಿಲ್ಲೆಯಲ್ಲಿ ನಿನ್ನೆ ಆಕ್ಸಿಜನ್ ಕೊರತೆ ಬೆನ್ನಲ್ಲೇ 23 ಸೋಂಕಿತರು ಸಾವನ್ನಪ್ಪಿದ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹೇಳಲಾಗ್ತಿದೆ.

ಚಾಮರಾಜನಗರದಲ್ಲಿ ನಡೆದಿರುವ ಘಟನೆಯ ಬಗ್ಗೆ ಈಗಾಗಲೇ ಸಚಿವರಾದ ಡಾ.ಕೆ.ಸುಧಾಕರ್‌ ಹಾಗೂ ಎಸ್. ಸುರೇಶ್‌ಕುಮಾರ್ ಮಾಹಿತಿ ಕಲೆ ಹಾಕಿದ್ದಾರೆ. ಇಂಥ ದುರಂತ ಮತ್ತೆ ರಾಜ್ಯದಲ್ಲಿ ಮರುಕಳುಹಿಸದಂತೆ ಕ್ರಮ ವಹಿಸುವ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುತ್ತದೆ ಎನ್ನಲಾಗಿದೆ.

The post ಕೊರೊನಾ ಹೆಚ್ಚಳ ಹಿನ್ನೆಲೆ: ಇಂದು ತುರ್ತು ಸಂಪುಟ ಸಭೆ ಕರೆದ ಸಿಎಂ appeared first on News First Kannada.

Source: newsfirstlive.com

Source link