ನವದೆಹಲಿ: ದೇಶದಲ್ಲಿ ಕೊರೊನಾ ಎರಡನೇ ಅಲೆ ಜೋರಾಗಲು ಚುನಾವಣಾ ಆಯೋಗವೇ ಕಾರಣ ಎಂದು ಮದ್ರಾಸ್​ ಹೈ ಕೋರ್ಟ್​ ಅಸಮಾಧಾನ ವ್ಯಕ್ತಪಡಿಸಿದೆ.

ಚುನಾವಣಾ ಆಯೋಗ ಮಾಡಿರುವ ತಪ್ಪಿಗೆ ಅದರ ಅಧಿಕಾರಿಗಳ ವಿರುದ್ಧ ಕೊಲೆ ಕೇಸ್​ ದಾಖಲಿಸಿದರೂ ತಪ್ಪಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕೋರ್ಟ್.. ದೇಶದಲ್ಲಿ ಕೊರೊನಾ ಸೋಂಕಿನ ಹರಡುವಿಕೆ ಬಗ್ಗೆ ಅರಿವಿದ್ದರೂ ಪಂಚ ರಾಜ್ಯಗಳಲ್ಲಿ ಚುನಾವಣೆ ನಡೆಸಲಾಯಿತು. ಚುನಾವಣಾ ಪ್ರಚಾರ ನಡೆಸದಂತೆ ನ್ಯಾಯಾಲಯ ಆದೇಶ ನೀಡಿದ್ದರೂ ಆಯೋಗ ಅದರ ಬಗ್ಗೆ ಹೆಚ್ಚಿನ ಗಮನ ಹರಿಸಲಿಲ್ಲ ಎಂದು ಛೀಮಾರಿ ಹಾಕಿ, ಮುಂದೆ ಸೂಕ್ತ ಮುನ್ನೆಚ್ಚರಿಕೆ ವಹಿಸದಿದ್ದರೆ ಮತ ಎಣಿಕೆಗೆ ತಡೆ ನೀಡುವ ಎಚ್ಚರಿಕೆಯನ್ನೂ ನೀಡಿದೆ.

The post ‘ಕೊರೊನಾ 2 ನೇ ಅಲೆ ಹೆಚ್ಚಾಗಲು ನೀವೇ ಕಾರಣ’ ಚು. ಆಯೋಗಕ್ಕೆ ಮದ್ರಾಸ್ ಹೈಕೋರ್ಟ್ ತರಾಟೆ appeared first on News First Kannada.

Source: News First Kannada
Read More