ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿನ್ನೆ ಕೋವಿಡ್ 3ನೇ ಅಲೆಗೆ ಸಂಬಂಧಿಸಿದ ಪೂರ್ವ ಸಿದ್ಧತೆ ಕುರಿತಂತೆ ರಚಿಸಲಾಗಿರುವ ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ಕಾರ್ಯಪಡೆಯೊಂದಿಗೆ ಸಭೆ ನಡೆಸಿದರು.

ಕೋವಿಡ್ 3ನೇ ಅಲೆಯನ್ನು ತಡೆಗಟ್ಟಲು ಕೈಗೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳು ಹಾಗೂ ಕಲ್ಪಿಸಬೇಕಾದ ಮೂಲಸೌಕರ್ಯ ಹಾಗೂ ಚಿಕಿತ್ಸಾ ಸೌಲಭ್ಯಗಳು ಹಾಗೂ ಅಗತ್ಯವಿರುವ ಮಾನವ ಸಂಪನ್ಮೂಲ, ಔಷಧಗಳು ಮೊದಲಾದ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಒಂದು ವಾರದೊಳಗೆ ಕಾರ್ಯಪಡೆಯು ತನ್ನ ವರದಿಯನ್ನು ಸಲ್ಲಿಸುವುದಾಗಿ ಡಾ.ದೇವಿ ಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.

ಕಾರ್ಯಪಡೆಯ ಶಿಫಾರಸುಗಳನ್ನು ಆಧರಿಸಿ, ಸರ್ಕಾರವು ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಈ ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್, ಆರೋಗ್ಯ ಸಚಿವ ಡಾ. ಸುಧಾಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಮುಖ್ಯ ಕಾರ್ಯದರ್ಶಿಗಳಾದ ಡಾ.ಇ.ವಿ.ರಮಣರೆಡ್ಡಿ, ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಮತ್ತು ಇತರ ಅಧಿಕಾರಿಗಳು ಭಾಗವಹಿಸಿದ್ದರು.

The post ಕೊರೊನಾ 3ನೇ ಅಲೆ: ಡಾ.ದೇವಿಶೆಟ್ಟಿ ತಂಡ ಸರ್ಕಾರಕ್ಕೆ ಹೇಳಿದ್ದೇನು..? appeared first on News First Kannada.

Source: newsfirstlive.com

Source link