ಕೊಲೆ ಆರೋಪದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಕಾಂಗ್ರೆಸ್ ನಾಯಕನಿಗೆ ಹಾಲಿನ ಅಭಿಷೇಕ | Milk Bath For Madhya Pradesh Congress Leader Released On Bail In Attempted Murder Case


ಚುನಾವಣೆಯ ಸಂದರ್ಭದಲ್ಲಿ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಚಂದುರಾವ್ ಶಿಂಧೆ ಅವರನ್ನು ಕೊಲ್ಲಲು ಯತ್ನಿಸಿದ ಆರೋಪದ ಮೇಲೆ ರಾಜು ಭಡೋರಿಯಾ ಅವರನ್ನು ಈ ವರ್ಷ ಜುಲೈ 13ರಂದು ರಾಜಸ್ಥಾನದ ಕೋಟಾದಲ್ಲಿ ಬಂಧಿಸಲಾಗಿತ್ತು.

ಕೊಲೆ ಆರೋಪದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಕಾಂಗ್ರೆಸ್ ನಾಯಕನಿಗೆ ಹಾಲಿನ ಅಭಿಷೇಕ

ಕೊಲೆ ಆರೋಪದಲ್ಲಿ ಜೈಲು ಸೇರಿದ್ದ ಕಾಂಗ್ರೆಸ್ ನಾಯಕನಿಗೆ ಹಾಲಿನ ಅಭಿಷೇಕ

ಇಂದೋರ್: ಬಿಜೆಪಿ ಕಾರ್ಯಕರ್ತನ ಹತ್ಯೆಗೆ ಯತ್ನಿಸಿದ ಆರೋಪ ಹೊತ್ತು ಜೈಲು ಸೇರಿದ್ದ ಮಧ್ಯಪ್ರದೇಶದ (Madhya Pradesh) ಕಾಂಗ್ರೆಸ್ (Congress) ಕಾರ್ಪೊರೇಟರ್ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಆ ಕಾರ್ಪೋರೇಟರ್​​ಗೆ ಅವರ ಬೆಂಬಲಿಗರು ಹಾಲಿನ ಅಭಿಷೇಕ ಮಾಡಿ, ಡ್ರಮ್ ಬಾರಿಸಿ ಸ್ವಾಗತಿಸಿರುವ ವಿಡಿಯೋ ವೈರಲ್ ಆಗಿದೆ.

ಇಂದೋರ್ ಕಾಂಗ್ರೆಸ್ ಕಾರ್ಪೊರೇಟರ್ ರಾಜು ಭಡೋರಿಯಾ ಅವರಿಗೆ ನೀಡಿದ ಸ್ವಾಗತದ ಕೆಲವು ಫೋಟೋ, ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ವಿಪಕ್ಷ ಕಾಂಗ್ರೆಸ್ ಕೊಲೆ ಪ್ರಕರಣದ ಆರೋಪಿಯನ್ನು ವೈಭವೀಕರಿಸುತ್ತಿದೆ ಎಂದು ಆಡಳಿತಾರೂಢ ಬಿಜೆಪಿ ಟೀಕಿಸಿದೆ.

ಜುಲೈ 6ರಂದು ಇಂದೋರ್ ಚುನಾವಣೆಯ ಸಂದರ್ಭದಲ್ಲಿ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಚಂದುರಾವ್ ಶಿಂಧೆ ಅವರನ್ನು ಕೊಲ್ಲಲು ಯತ್ನಿಸಿದ ಆರೋಪದ ಮೇಲೆ ರಾಜು ಭಡೋರಿಯಾ ಅವರನ್ನು ಈ ವರ್ಷ ಜುಲೈ 13ರಂದು ರಾಜಸ್ಥಾನದ ಕೋಟಾದಲ್ಲಿ ಬಂಧಿಸಲಾಗಿತ್ತು. ರಾಜು ಭಡೋರಿಯಾ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 307 (ಕೊಲೆ ಯತ್ನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

TV9 Kannada


Leave a Reply

Your email address will not be published.