ಬೆಂಗಳೂರು: ಬಿಡಿಎ ಅಧ್ಯಕ್ಷ, ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಕೊಲೆಗೆ ಸಂಚು ನಡೆದಿತ್ತು ಅನ್ನೋ ಆರೋಪ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ತನಿಖೆಯನ್ನ ಆರಂಭಿಸಿದ್ದಾರೆ.
ಈ ಬಗ್ಗೆ ನ್ಯೂಸ್ಫಸ್ಟ್ಗೆ ಪ್ರತಿಕ್ರಿಯಿಸಿರುವ ಎಸ್.ಆರ್.ವಿಶ್ವನಾಥ್.. ಈ ಪ್ರಕರಣದ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇದೆ. ವಿಧಾನ ಪರಿಷತ್ ಚುನಾವಣೆ ಪ್ರಚಾರದಲ್ಲಿದ್ದೇನೆ. ಮಧ್ಯಾಹ್ನ ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡುತ್ತೇನೆ. ಅಲ್ಲದೇ ಮಹತ್ವದ ವಿಡಿಯೋ ಕೂಡ ಬಿಡುಗಡೆ ಮಾಡುತ್ತೇನೆ. ಇದರಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಅನ್ನೋದನ್ನೂ ಬಹಿರಂಗಪಡಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: S.R.ವಿಶ್ವನಾಥ್ ಹತ್ಯೆಗೆ ಸ್ಕೆಚ್ ಆರೋಪ; ಕುಳ್ಳ ದೇವರಾಜ್ ವಿರುದ್ಧ ಕೇಳಿಬಂದಿರುವ ಆರೋಪವೇನು..?
ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣನನ್ನ ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿ ಕಳುಹಿಸಿದ್ದಾರಂತೆ. ಅಲ್ಲದೇ ವಿಶ್ವನಾಥ್ ಅವರ ಆಪ್ತ ದೇವರಾಜ್ ಅಲಿಯಾಸ್ ಕುಳ್ಳದೇವರಾಜ್ ಎಂಬಾತನನ್ನೂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈತ ಗೋಪಾಲಕೃಷ್ಣ ವಿಶ್ವನಾಥ್ ಬಗ್ಗೆ ಮಾತನಾಡಿದ್ದನ್ನ ವಿಡಿಯೋ ಮಾಡಿಕೊಂಡಿದ್ದ ಎನ್ನಲಾಗಿದೆ.
ಇದನ್ನೂ ಓದಿ: S.R.ವಿಶ್ವನಾಥ್ ಹತ್ಯೆಗೆ ಸ್ಕೆಚ್ ಆರೋಪ; ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ವಶಕ್ಕೆ